Friday, November 20, 2026

ಪ್ರಾಯೋಗಿಕ ಆವೃತ್ತಿ

ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ ಕಾರ್ಯಾಗಾರ : ಸುಭಾಷ್ ಪಾಳೇಕರ್

ಸುಭಾಷ್ ಪಾಳೇಕರ್ ಕೃಷಿ ಪದ್ದತಿಯಿಂದ ರೈತರ ಕೃಷಿ ಸುಧಾರಣೆಯಾಗಲಿದ್ದು, ಆದಾಯ ಹೆಚ್ಚಳವಾಗುತ್ತದೆ. ನಾಟಿ ಹಸು ಆಧಾರಿತ ಕೃಷಿ ಇದಾಗಿದ್ದು, ಹಸು ಹಾಗೂ ಕೃಷಿ ಎರಡರಿಂದಲೂ ಆದಾಯಗಳಿಸಬಹುದಾಗಿದ್ದು, ಜೂನ್ 11ರಿಂದ ನಡೆಯಲಿರುವ ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿಯ ಮೂರು ದಿನಗಳ ಸುಭಾಷ್ ಪಾಳೇಕರ್ ಕೃಷಿ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಕೃಷಿ ಸಂಶೋಧಕ ಸುಭಾಷ್ ಪಾಳೇಕರ್ ಕರೆ ನೀಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಲ ಭೂಮಾತ ಟ್ರಸ್ಟ್ ಹಾಗೂ ಸುಭಾಷ್ ಪಾಳೇಕರ್ ಕೃಷಿ ಜನಾಂದೋಳನ ಸಮಿತಿಯ ಮಂಡ್ಯದ ಸಂಘಟಕರು ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಜೂನ್ 11ರಿಂದ 13ರ ವರೆಗೆ ಕಾರ್ಯಾಗಾರ ಆಯೋಜಿಸಿರುವುದು ಹೆಮ್ಮೆಯ ವಿಷಯ ಎಂದರು.

ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಹವಾಮಾನ ವೈಪರಿತ್ಯ ಉಂಟಾಗಿದೆ, ರೈತ ತಾನು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ದೊರೆಯದೇ, ವೈಜ್ಞಾನಿಕ ಬೆಲೆಯೂ ಸಿಗದಿರುವುದು, ರಾಸಾಯನಿಕ ಬಳಕೆಯಿಂದ ಕಡಿಮೆ ಇಳುವರಿ ದೊರೆಯುತ್ತಿರುವುದೂ ರೈತ ಆತ್ಮಹತ್ಯೆಗೆ ಕಾರಣವಾಗಿದೆ ಎಂದರು.

ವಿದೇಶಗಳಿಂದ ಆಮದಾಗುವ ಬಯೋ ಟೆಕ್ನಾಲಜಿಗಿಂತ ದೇಸಿ ಟೆಕ್ನಾಲಜಿ ಬಳಕೆ ಹೆಚ್ಚಾಗಬೇಕಿದೆ. ದೇಸಿ ಗೋವುಗಳನ್ನು ಬೆಳೆಸಿ ಅವುಗಳ ಮೂತ್ರ, ಸಗಣಿಯಿಂದ ಜೀವಾಮೃತ ತಯಾರಿಸಿ ಕೃಷಿಯಲ್ಲಿ ಬಳಸಿದಾಗ ಕೃಷಿಯಲ್ಲಿ ಉತ್ಪಾದನೆ ಹೆಚ್ಚಾಗಲಿದ್ದು, ಮಾರುಕಟ್ಟೆಯಿಂದ ಯಾವುದೇ ರೀತಿಯಾದ ಕೃಷಿ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವೂ ಇರುವುದಿಲ್ಲವಾದ ಕಾರಣ ಕಡಿಮೆ ವೆಚ್ಚ ಅಥವಾ ವೆಚ್ಚ ರಹಿತ ಕೃಷಿ ಮಾಡಬಹುದು. ಕ್ಯಾನ್ಸರ್ ತಡೆಗಟ್ಟುವಂತಹ ಆಹಾರ ಉತ್ಪಾದಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಆಯೋಜಕ ಅನಂತರಾವ್ ಮಾತನಾಡಿ, ಕಾರ್ಯಾಗಾರದಲ್ಲಿ ಭಾಗವಹಿಸಲು ಈಗಾಗಲೇ 600 ಜನ ನೊಂದಾಯಿಸಿಕೊಂಡಿದ್ದು, 1000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಕೇರಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಹೊರರಾಜ್ಯಗಳಿಂದ 45 ಮಂದಿ ನೊಂದಾಯಿಸಿಕೊಂಡಿರುವುದಾಗಿ ಪ್ರಶ್ನೆಗೆ ಉತ್ತರ ನೀಡಿದರು.

ಗೋಷ್ಠಿಯಲ್ಲಿ ಕಾರ್ಯಾಗಾರ ಆಯೋಜಕರಾದ ದಯಾನಂದ್, ಚಂದ್ರಶೇಖರ್, ಯು.ಆನಂದ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ