Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೂ.16ರಂದು ಆಲಕೆರೆ ಗ್ರಾಮದಲ್ಲಿ ರೈತ ಶಾಲೆ ಉದ್ಘಾಟನೆ

ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತ ಶಾಲೆ ಉದ್ಘಾಟನೆ ಕಾರ್ಯಕ್ರಮ ಜೂನ್ 16ರಂದು ನಡೆಯಲಿದೆ.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಶಾಸಕ ರವಿಕುಮಾರ್‌ಗೌಡ (ಗಣಿಗ) ಸಮಾರಂಭ ಉದ್ಘಾಟಿಸುವರು. ಅಲಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್. ಶಶಿಧರ್ ಅಧ್ಯಕ್ಷತೆ ವಹಿಸುವರು.

ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಗ್ರಾಮ ಘಟಕದ ಖಜಾಂಚಿ ಪ್ರದೀಪ್‌ಕುಮಾ‌ರ್ ಪ್ರಾಸ್ತಾವಿಕ ನುಡಿ ನುಡಿಯುವರು. ಗೌರವ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ. ಕುಮಾರ, ಜಂಟಿ ಕೃಷಿ ನಿರ್ದೇಶಕ ಅಶೋಕ ವಿ.ಎಸ್., ಕೃಷಿ ವಿಶ್ವವಿದ್ಯಾಲಯದ ವಿಶೇ‍ಷಾಧಿಕಾರಿ ಕೆ.ಎಂ. ಹರಿಣಿಕುಮಾ‌ರ್ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ನಿರ್ದೇಶಕರಾದ ಬಿ.ಆರ್. ರಾಮಚಂದ್ರು, ಎಂ.ಎಸ್.ರಘುನಂದನ್, ಪಿಇಟಿ ಅಧ್ಯಕ್ಷ ವಿಜಯ್ ಆನಂದ್, ಬಿಜೆಪಿ ಮುಖಂಡ ಸಚ್ಚಿದಾನಂದ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್ ಹಾಗೂ ಸಮಾಜ ಸೇವಕ ವಸಂತರಾಜು ಸೇರಿದಂತೆ ಮತ್ತಿತರರು ಭಾಗವಹಿಸುವರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ