Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜೆಪಿಗೆ ಆಹ್ವಾನ

ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಗೌರವ ಡಾಕ್ಟರೇಟ್ ಗೆ ಭಾಜನರಾಗಿರುವ ಈ ನಾಡಿನ ಸಾಂಸ್ಕೃತಿಕ ರಾಯಭಾರಿಗಳೂ ಆಗಿರುವ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ ಜಯಪ್ರಕಾಶ್ ಗೌಡ ಅವರನ್ನು ಮಂಡ್ಯ ವಿಶ್ವವಿದ್ಯಾಲಯದ ವತಿಯಿಂದ ಅಧಿಕೃತವಾಗಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಜೂ.14ರಂದು ಮಂಡ್ಯ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರೊ.ಜಯಪ್ರಕಾಶ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಯೋಗ ನರಸಿಂಹಾಚಾರಿ, ಸಿಂಡಿಕೇಟ್ ಸದಸ್ಯ ನಾಗರಾಜು, ನಿವೃತ್ತ ಪ್ರಾಂಶುಪಾಲರಾದ ಡಾ. ಎಸ್ ಬಿ ಅನಿಲ್ ಕುಮಾರ್ ಹಾಗೂ ಪ್ರಾಧ್ಯಾಪಕ ಜಯರಾಮರವರು ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ