Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸಿದ್ದರಾಮಯ್ಯ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮಂಡ್ಯ ತಾಲೂಕಿನ ಕರಡಿಕೊಪ್ಪಲು ಗ್ರಾಮದಲ್ಲಿ ನಿರ್ಮಿಸಲಾಗಿರುವ ಸಿದ್ದರಾಮಯ್ಯ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ಕಾರ್ಯಕ್ರಮವನ್ನು ಜೂನ್ 15 ರ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ತಿಳಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ.ಪುಟ್ಟಸ್ವಾಮಿ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ವಂತ ಖರ್ಚಿನಲ್ಲಿ ನಿರ್ಮಿಸಿದ್ದು, ಗ್ರಾಮದಲ್ಲಿನ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತರಲಾಗುವುದು ಎಂದರು.

ಶುದ್ದ ಕುಡಿಯುವ ನೀರಿನ ಘಟಕವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಶಾಸಕ ಪಿ.ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸುವರು. ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಡಾ.ರಾಮಮನೋಹರ ಲೋಹಿಯ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್.ಶಿವಣ್ಣ ಉಪಸ್ಥಿತಿ ವಹಿಸುವರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕೆ.ಆರ್.ನಗರ ಶಾಸಕ ರವಿಶಂಕರ್, ಕಡೂರು ಶಾಸಕ ಆನಂದ್, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಆರ್.ಮಹದೇವು, ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ಮನ್‌ಮುಲ್ ಅಧ್ಯಕ್ಷ ಶಿವಪ್ಪ, ಸಮಾಜ ಸೇವಕ, ಉದ್ಯಮಿ ಸ್ಟಾರ್ ಚಂದ್ರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಸಂಘದ ಖಜಾಂಚಿ ಎಸ್.ಎನ್.ರಾಜು, ಕೆಂಚಪ್ಪ, ಯತೀಶ್, ಮಹದೇವ್, ಮಹೇಶ್, ಅರುಣ್, ರಮೇಶ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ