Tuesday, November 24, 2026

ಪ್ರಾಯೋಗಿಕ ಆವೃತ್ತಿ

ಗೃಹ ಕಾರ್ಮಿಕರ ರಕ್ಷಣಾ ಕಾನೂನು ಜಾರಿಯಾಗಲಿ : ಲಲಿತಮ್ಮ

ಗೃಹ ಕಾರ್ಮಿಕರಿಗಾಗಿ ರಾಷ್ಟ್ರೀಯ ಕಾನೂನನ್ನು ಜಾರಿಗೆ ತರಲು ಸರ್ಕಾರಕ್ಕೆ ಸುಪ್ರೀಂ ನ್ಯಾಯಾಲಯ ಆದೇಶ ನೀಡಿದ್ದು, ಗೃಹ ಕಾರ್ಮಿಕರ ರಕ್ಷಣೆಗಾಗಿ ಸೂಕ್ತ ಕಾನೂನುಗಳನ್ನು ಜಾರಿ ಮಾಡಲು ಸರ್ಕಾರ ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆಯ ಜಿಲ್ಲಾಧ್ಯಕ್ಷೆ ಲಲಿತಮ್ಮ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಕಾರ್ಮಿಕರಿಗೆ ಯಾವುದೇ ರೀತಿಯ ಕಾನೂನಿನ ರಕ್ಷಣೆಯಿಲ್ಲದೇ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದರು.

ಗೃಹ ಸಂಬಂಧಿತ ಕೆಲಸಗಳಲ್ಲಿ ಹೆಚ್ಚಾಗಿ ಕೊಳಚೆ ಪ್ರದೇಶದಲ್ಲಿ ವಾಸಿಸುವ ಬಡ ಮಹಿಳೆಯರು, ಅವಿದ್ಯಾವಂತ ಪರಿಶಿಷ್ಠರೇ ಹೆಚ್ಚಾಗಿದ್ದು, ಅವರ ಜೀವನ ನಿರ್ವಹಣೆ, ಕುಟುಂಬದ ಬೆಳವಣಿಗೆಗೆ ಇತರರ ಮನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕನಿಷ್ಠ ವೇತನದ ನಿಗದಿಯು ಆಗದೆ, ಜೀವನ ನಿರ್ವಹಿಸಲು ಕಷ್ಟಕರವಾಗಿದೆ ಎಂದು ಹೇಳಿದರು.

ಗೃಹ ಕಾರ್ಮಿಕರು ಬಹುತೇಕ ಮಹಿಳೆಯರೇ ಆಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಸಂಘಟನೆಗೆ ೧೩೦೦ ಸದಸ್ಯರು ನೊಂದಾಯಿತರಾಗಿದ್ದಾರೆ. ಗೃಹ ಕಾರ್ಮಿಕರಿಗೆ ನೀಡಬೇಕಾದ ಸವತ್ತುಗಳು ಹಾಗೂ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಜುಲೈ 9ರ ಆಲ್ ಇಂಡಿಯ ಗೃಹ ಕಾರ್ಮಿಕರ ಹೋರಾಟದಲ್ಲಿ ಭಾಗವಹಿಸುವುದಾಗಿ ಇದೇ ವೇಳೆ ತಿಳಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೋಭ, ಪಂಕಜ, ಮಂಜುಳ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ