ಬಸ್ಸು, ಕಾರು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಕಾರು ಬೈಕ್ ನಲ್ಲಿದ್ದ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಬಾಣಸಮುದ್ರ ಗೇಟ್ ಬಳಿ ಜರುಗಿದೆ.
ಭಾನುವಾರ ಸಂಜೆ 7.30 ರ ಸಮಯದಲ್ಲಿ ಈ ಘಟನೆ ಜರುಗಿದ್ದು ಮಳವಳ್ಳಿಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಈ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಕನಕಪುರ ತಾಲ್ಲೂಕು ಕಗ್ಗಲೀಪುರದ ಗುರುಸ್ವಾಮಿ, ಬ್ಯಾಟರಾಜು, ಕಾಂತರಾಜು, ವೆಂಕಟಪ್ಪ, ಗಾಯಗೊಂಡಿದ್ದ ಬೈಕ್ ನಲ್ಲಿ ಬರುತ್ತಿದ್ದ ಸಂಜಯ್, ಚಂದು, ಚಂದನ್ ಅವರುಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಪಟ್ಟಣದ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಕ್ ಸವಾರ ಸಾವು
ವೇಗವಾಗಿ ಬರುತ್ತಿದ್ದ ಕಾರು ಬೈಕ್ ನಡುವೆ ಮುಖಾ ಮುಖಿಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಸಂಶೆಟ್ಟಿಪುರ ಗೇಟ್ ಬಳಿ ಜರುಗಿದೆ.
ತಮಿಳು ನಾಡು ಮೂಲದ 25 ವರ್ಷದ ರಾಹುಲ್ ವಿಘ್ನೇಶ್ವರ್ ಎಂಬಾತನೇ ಮೃತಪಟ್ಟ ದುರ್ದೈಯಾಗಿದ್ದು ಭಾನುವಾರ ಸಂಜೆ 7 ಗಂಟೆ ಸಮಯದಲ್ಲಿ ಈ ಘಟನೆ ಜರುಗಿದೆ.
ಬೆಂಗಳೂರಿನ ಖಾಸಗಿ ಕಂಪನಿ ಯಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ಸ್ನೇಹಿತರು ಎರಡು ಬೈಕ್ ಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಬೆಂಗಳೂರಿಗೆ ತೆರಳುತ್ತಿದ್ದ ವಾಪಸ್ಸಾಗುತ್ತಿದ್ದಾಗ ಮಳವಳ್ಳಿ ಕಡೆಯಿಂದ ಬಂದ ಕಾರು ಹಾಗೂ ರಾಹುಲ್ ವಿಘ್ನೇಶ್ವರ್ ಸವಾರಿ ಮಾಡುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತು ಎನ್ನಲಾಗಿದೆ.
ಈ ಬೈಕ್ ನ ಹಿಂಬದಿ ಸವಾರ ಪುವಿತ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




