Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಟನ್ ಕಬ್ಬಿಗೆ 5,500 ಬೆಲೆ ನಿಗದಿ ಮಾಡಬೇಕು, ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ಕಬ್ಬು ಬೆಳೆಗಾರರ ಸಂಘವು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಕಾರ್ಯದರ್ಶಿ ಭರತ್ ರಾಜ್ ನೇತೃತ್ವದಲ್ಲಿ ಪ್ರತಿಭಟಿಸಿದ ಕಬ್ಬು ಬೆಳೆಗಾರರು, ಆಯುಕ್ತರು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರ ಮಾರ್ಗದರ್ಶನದಂತೆ ಟನ್ ಕಬ್ಬಿಗೆ ಕಟಾವು ವೆಚ್ಚ ಮತ್ತು ಸಾಗಾಣಿಕ ವೆಚ್ಚವನ್ನು ಪ್ರಾರಂಭದಿಂದ ಕೊನೆವರೆಗೂ ಒಂದೇ ರೀತಿಯಲ್ಲಿ ನೀಡಬೇಕು. ಇದರ ಉಸ್ತುವಾರಿಯನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳಬೇಕಕೆಂದು ಆಗ್ರಹಿಸಿದರು.

ಸಕ್ಕರೆ ಆಡಳಿತ ಮಂಡಳಿಯವರು ಹಾಗೂ ಕಬ್ಬು ಬೆಳೆಗಾರರ ಮುಖಂಡರ ಸಭೆಯನ್ನ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಖಾನೆ ಪ್ರಾರಂಭಕ್ಕೆ ಮುನ್ನ ನಡೆಸಬೇಕು. ಕಬ್ಬು ಬೆಳೆಗಾರರಿಗೆ ಉಚಿತವಾಗಿ ಮಡ್ಡಿ ಮತ್ತು ಬೂದಿಯನ್ನು ಸಹ ನೀಡುವುದರ ಜೊತೆಗೆ ಬೆಳೆಗಾರರಿಗೆ ಟನ್ ಗೆ ಒಂದು ಕೆ.ಜಿಯಂತೆ ಸಕ್ಕರೆ ಉಚಿತವಾಗಿ ನೀಡಬೇಕೆಂದು ಆಗ್ರಹಿಸಿದರು.

ಕೇಂದ್ರದ ಸಕ್ಕರೆ ಅಭಿವೃದ್ಧಿ ಮಂಡಳಿಯವರು ಬೇಸಿಗೆಯಲ್ಲಿ ಕಬ್ಬು ಬೆಳೆಯುವ ರೈತರಿಗೆ ಎಕರೆಗೆ 10 ಸಾವಿರ ಸಹಾಯಧನ ನೀಡಬೇಕು. ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕ ಕಬ್ಬು ಖರೀದಿ ಮತ್ತು ಸರಬರಾಜು ನಿಯಂತ್ರಣ ಅಧಿನಿಯಮ 2013 ಹಾಗೂ ತಿದ್ದುಪಡಿ ಅಧಿನಿಯಮ 2014ರ ಕಲಂ ಅಡಿ ಎಥೆನಾಲ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು ಟನ್ ಗೆ 150 ರೂಪಾಯಿಗಳ ಬಾಕಿ ಹಣ ನೀಡಬೇಕು ಹಾಗೂ ಬ್ಬು ಸರಬರಾಜು ಮಾಡಲು ಮತ್ತು ಕೊಳ್ಳಲು ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಯುವ ರೈತರ ನಡುವೆ ದ್ವಿಪಕ್ಷೀಯ ಒಡಂಬಡಿಕೆ ನೋಂದಣಿ ಪತ್ರಕ್ಕೆ ಇಬ್ಬರೂ ಸಹಿ ಹಾಕಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕುಳ್ಳೇಗೌಡ, ರಘುನಾಥ್, ನಾಗೇಂದ್ರ, ಸತೀಶ್, ಲಿಂಗರಾಜಮೂರ್ತಿ, ಶ್ರೀನಿವಾಸ್, ಸಿದ್ದಗೌಡ, ವಿಶ್ವನಾಥ್, ಅಬ್ದುಲ್ ಶುಕುರ್, ಮುತ್ತುರಾಜು, ಗುರುಸ್ವಾಮಿ ಹಾಗೂ ನಂಜುಂಡಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ