Thursday, November 19, 2026

ಪ್ರಾಯೋಗಿಕ ಆವೃತ್ತಿ

ರಾಜ್ಯದಲ್ಲಿ ದ್ವೇಷಭಾಷಣ ತಡೆಗೆ ಪ್ರತ್ಯೇಕ ವಿಧೇಯಕ : ಸುಳ್ಳುಸುದ್ದಿ ಹರಡುವವರಿಗೆ ಜೈಲು

ರಾಜ್ಯದ ಕರಾವಳಿಯಲ್ಲಿ ಕೋಮು ಹತ್ಯೆಗಳ ಜತೆ ಹಿಂಸೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಕುರಿತು ಚರ್ಚಿಸಲಾಗಿದೆ.

ಸಂಪುಟ ಸಭೆಯಲ್ಲಿ ವಿಧೇಯಕ ಕುರಿತು ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದ್ದಾರೆ.

ಕರಡು ಮಸೂದೆಯ ಪ್ರಕಾರ, ನಕಲಿ ಸುದ್ದಿಗಳಲ್ಲಿ ತಪ್ಪು ಉಲ್ಲೇಖಗಳು ಅಥವಾ ಒಬ್ಬರ ಹೇಳಿಕೆಯ ಸುಳ್ಳು ಮತ್ತು/ಅಥವಾ ತಪ್ಪಾದ ವರದಿಗಳ ಸಂಯೋಜನೆ ಸೇರಿದೆ.

ಸತ್ಯ ಮತ್ತು / ಅಥವಾ ಸಂದರ್ಭದ ವಿರೂಪಕ್ಕೆ ಕಾರಣವಾಗುವ ಆಡಿಯೋ ಅಥವಾ ವೀಡಿಯೊ ತುಣುಕುಗಳನ್ನು ಸಂಪಾದಿಸುವುದು; ಕಾನೂನುಬದ್ಧ, ಸಂಘಟಿತ ಅಥವಾ ಅಸಂಘಟಿತ, ಅದು ಸಾಮಾಜಿಕ ಮಾಧ್ಯಮ ವಿಷಯವನ್ನು ಬಳಸಿಕೊಳ್ಳುವುದು, ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ, ಪರಿಶೀಲಿಸಿದ ಅಥವಾ ಗುಪ್ತನಾಮ, ಕಾಲ್ಪನಿಕ ಅಥವಾ ಸುಳ್ಳು ಖಾತೆ/ ಪುಟದ ಹೆಸರಿನ ಮೂಲಕ ಸಂದೇಶಗಳು ಮತ್ತು/ಅಥವಾ ಮಾಹಿತಿಯನ್ನು ಕಳುಹಿಸುವುದು, ನಕಲಿ ಸುದ್ಧಿಗಳನ್ನು ಹರಡುವುದನ್ನು ಸಂಪೂರ್ಣ ನಿಷೇಧಿಸುವುದನ್ನು ಕಾನೂನು ಖಚಿತರಡಿಸುತ್ತದೆ.

ಕಾಯ್ದೆಯನ್ನು ಜಾರಿಗೆ ತರಲು ನಕಲಿ ಸುದ್ದಿ ನಿಯಂತ್ರಣ ಪ್ರಾಧಿಕಾರವನ್ನು ರಚಿಸಲಾಗುತ್ತದೆ. ಈ ಪ್ರಾಧಿಕಾರವು ಕನ್ನಡ ಮತ್ತು ಸಂಸ್ಕೃತಿ, ಮಾಹಿತಿ ಮತ್ತು ಪ್ರಸಾರ ಸಚಿವರನ್ನು ಪದನಿಮಿತ್ತ ಅಧ್ಯಕ್ಷರನ್ನಾಗಿ; ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ತಿನಿಂದ ತಲಾ ಒಬ್ಬ ಸದಸ್ಯರನ್ನು ಅಧ್ಯಕ್ಷರು ನಾಮನಿರ್ದೇಶನ ಮಾಡುತ್ತಾರೆ. ರಾಜ್ಯ ಸರ್ಕಾರದಿಂದ ನೇಮಕಗೊಳ್ಳುವ ಸಾಮಾಜಿಕ ಮಾಧ್ಯಮ ವೇದಿಕೆಗಳ ಇಬ್ಬರು ಪ್ರತಿನಿಧಿಗಳು ಮತ್ತು ಕಾರ್ಯದರ್ಶಿಯಾಗಿ ಒಬ್ಬ ಐಎಎಸ್ ಅಧಿಕಾರಿಯನ್ನು ಒಳಗೊಂಡಿರುತ್ತದೆ.

ಸುಳ್ಳು ಸುದ್ದಿ ಹರಡುವವರಿಗೆ 7 ವರ್ಷ ಜೈಲು

ವ್ಯಕ್ತಿ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡುವಲ್ಲಿ ತಪ್ಪಿತಸ್ಥರೆಂದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಸಂಪುಟ ಸಭೆಯಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ವ್ಯವಸ್ಥೆಯ ಕಾರ್ಯನಿರ್ವಹಣೆಯ ಸ್ವರೂಪವನ್ನು ಚರ್ಚಿಸಲಾಗಿದ್ದು, ಮರುಪರಿಶೀಲಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಕೆಎಟಿಯ ಕಾರ್ಯನಿರ್ವಹಣೆಯ ಬಗ್ಗೆ ಚರ್ಚೆಗಳು ಮತ್ತು ಆಕ್ರೋಶಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಪುರನ್ ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲು ಚಿಂತೆ ನಡೆಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.

ಜು.17ಕ್ಕೆ ನಂದಿ ಬೆಟ್ಟದಲ್ಲಿ ಸಂಪುಟ ಸಭೆ

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜು.16 ಅಥವಾ 17 ರಂದು ನಿಗದಿಯಾಗಬಹುದು. ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಇಂದು ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಯಿತು ಎಂದು ಸಚಿವರು ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ