Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ವಿವಾಹಿತೆಯ ಇನ್ಸ್ಟಾಗ್ರಾಮ್ ಸ್ನೇಹ ಕೊಲೆಯಲ್ಲಿ ಅಂತ್ಯ

ಇನ್ಸ್ಟಾಗ್ರಾಮ್ ನಲ್ಲಿ ವಿವಾಹಿತೆಯನ್ನು ಪರಿಚಯ ಮಾಡಿಕೊಂಡ ಯುವಕನೊಬ್ಬ ಕೇವಲ ಹತ್ತೇ ದಿನದಲ್ಲಿ ಆಕೆಯೊಂದಿಗೆ ಸುತ್ತಾಡಿ ಆನಂತರ ಆಕೆಯನ್ನು ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದ ಬಳಿ ಕಳೆದ ಭಾನುವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ (35) ಹತ್ಯೆಗೊಳಗಾದ ಮಹಿಳೆ. ಈಕೆಯನ್ನು ಕೆ.ಆರ್.ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದ ಪುನೀತ್ ಕೊಲೆಗೈದು, ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಕೆಲವು ದಿನಗಳ ಹಿಂದೆ ಇನ್ಸ್ಟಾಗ್ರಾಮ್ ನಲ್ಲಿ ವಿವಾಹಿತ ಮಹಿಳೆಯಾದ ಪ್ರೀತಿಯನ್ನು ಪರಿಚಯ ಮಾಡಿಕೊಂಡಿದ್ದ ಪುನೀತ್, ಆಕೆಯೊಂದಿಗೆ ಸ್ನೇಹ ಬೆಳೆಸಿ ಆನಂತರ ಮೈಸೂರು, ಮಂಡ್ಯದಲ್ಲಿ  ಓಡಾಡಿದ್ದ.

ಕಳೆದ ಭಾನುವಾರ ಮೈಸೂರಿಗೆ ಒಟ್ಟಿಗೆ ಕಾರಿನಲ್ಲಿ ತೆರಳಿ, ಇಬ್ಬರು ಮೈಸೂರು, ಮಂಡ್ಯ ಪ್ರವಾಸಿ ಸ್ಥಳಗಳಲ್ಲಿ ಸುತ್ತಾಡಿದ್ದರು. ನಂತರ ರಾತ್ರಿ ವೇಳೆ ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ, ಅಲ್ಲಿಯೇ ಪ್ರೀತಿಯನ್ನು ಕೊಲೆಗೈದ ಪುನೀತ್ ಚಿನ್ನಾಭರಣ ದೋಚಿದ್ದ ಎನ್ನಲಾಗಿದೆ.

ಕರೋಟಿ ಗ್ರಾಮದ ತನ್ನ ಜಮೀನಿನಲ್ಲಿ ಪ್ರಿಯತಮೆ ಶವ ಬಚ್ಚಿಟ್ಟಿದ್ದ ಆಸಾಮಿ, ಪ್ರಿಯತಮೆ ಪೋನ್ ಗೆ ಬಂದ ಕರೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಈ ಬಗ್ಗೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ