Sunday, November 22, 2026

ಪ್ರಾಯೋಗಿಕ ಆವೃತ್ತಿ

ರೈತ ವಿರೋಧಿ ಭೂಸ್ವಾಧೀನದಿಂದ ಸರ್ಕಾರ ಹಿಂದೆ ಸರಿಯಲಿ : ಉಗ್ರನರಸಿಂಹೇಗೌಡ

ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ರೈತರ ೧೮೦೦ ಎಕರೆ ಭೂಸ್ವಾಧಿನಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರ ರೈತ ವಿರೋಧಿಯಾಗಿದ್ದು, ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಜನಾಂದೋಲನಗಳ ಮಹಾಮೈತ್ರಿಯ ಉಗ್ರನರಸಿಂಹೇಗೌಡ ಆಗ್ರಹಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಂದ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡು ಬಂಡವಾಳಶಾಹಿಗಳ ಪರವಾಗಿ ನಿಲ್ಲುವ ದುರುದ್ದೇಶ ಸರ್ಕಾರದ್ದಾಗಿದೆ ಎಂದರು.

ಹಿಂದಿನ ಸರ್ಕಾರ ಭೂಸ್ವಾಧಿನಕ್ಕೆ ಮುಂದಾದಾಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಹೇಳಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಕೈಬಿಡುವುದಾಗಿ ಕೊಟ್ಟ ವಾಗ್ದಾನವನ್ನು ಮರೆತು ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಕಿಡಿಕಾರಿದರು.

ಸಚಿವ ಎಂ.ಬಿ.ಪಾಟೀಲ್ ಹಾಗೂ ಹೆಚ್.ಕೆ.ಮುನಿಯಪ್ಪ ೧೮೦೦ ಎಕರೆ ಭೂಮಿಯಲ್ಲಿ ೪೯೦ ಎಕರೆ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವ ಕಾರ್ಯದಿಂದ ಕೈಬಿಡುವುದಾಗಿ ಹೇಳಿ ರೈತರ ದಾರಿ ತಪ್ಪಿಸುತ್ತಿದ್ದು, ಸರ್ಕಾರ ಈಗಾಗಲೇ ಕೈಗಾರಿಕೆಗಳಿಗೆ ಸ್ವಾಧೀನ ಪಡಿಸಿಕೊಂಡ ರೈತರ ಭೂಮಿಯಲ್ಲಿ ಶೇ ೭೦ ರಷ್ಟು ಭೂಮಿ ಬಾಕಿ ಉಳಿದಿದ್ದು, ಆ ಸ್ಥಳದಲ್ಲಿಯೇ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಲಿ ಎಂದು ಹೇಳಿದರು.

ಭವಿಷ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ದೇಶದಿಂದ ಬಲವಂತವಾಗಿ ಈಗಲೇ ರೈತರಿಂಧ ಭೂಮಿ ಸ್ವಾಧೀನ ಮಾಡಿಕೊಳ್ಳುತ್ತಿರುವ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿದೆ ಎಂಬುದನನು ಸಾಭೀತು ಮಾಡುತ್ತಿದೆ. ಸರ್ಕಾರ ತನ್ನ ನಿರ್ಧಾರವನ್ನು ಕೈಬಿಟ್ಟು ಕೂಡಲೇ ನೋಟಿಫಿಕೇಷನ್ ನೀಡಿರುವ ರೈತರ ಭೂಮಿಯನ್ನು ಕೂಡಲೇ ಹಿಂದಿರುಗಿಸಬೇಕೆಂದು ಒತ್ತಾಯಿಸಿದರು.

ಕೆ.ಆರ್.ಎಸ್.ನಲ್ಲಿ ನಿರ್ಮಿಸಲು ಹೊರಟಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ೨೬೦೦ ಕೋಟಿ ರೂ ಹಾಗೂ ಕಾವೇರಿ ಆರತಿಗೆ ೯೬ ಕೋಟಿ ವ್ಯಯಿಸಲು ಸರ್ಕಾರ ಮುಂದಾಗಿದ್ದು, ಈ ಹಣದಿಂದ ರಾಜ್ಯದ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಮೂಲ್ಯಾಗ್ರ ಪ್ರಗತಿ ಕಾಣಲು ಅವಕಾಶವಿದ್ದು, ಶಿಕ್ಷ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಂತೋಷ್ ಕೌಲಗಿ, ನಗರಕೆರೆ ಜಗದೀಶ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ