Saturday, November 21, 2026

ಪ್ರಾಯೋಗಿಕ ಆವೃತ್ತಿ

ಯುವಜನರು ದುಶ್ಚಟದಿಂದ ದೂರವಾದರೆ ಸದೃಢ ಸಮಾಜ ; ಪ್ರಕಾಶ್

ಯುವಜನತೆ ಮಾದಕ ವಸ್ತುಗಳ ವ್ಯಸನದಷ್ಟೇ ಮೊಬೈಲ್ ಗೀಳು, ಆನ್ಲೈನ್ ಗೇಮ್ ಗಳಿಗೆ ಬಲಿಯಾಗುತ್ತಿದ್ದಾರೆ, ಇಂತಹ ವ್ಯಸನದಿಂದ ದೂರವಿದ್ದರೆ ಸದೃಢ ಸಮಾಜ ಸಾಧ್ಯವೆಂದು ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ಹೇಳಿದರು.

ಮಂಡ್ಯನಗರದ ಸಿಹಿನೀರು ಕೊಳದ ಆರ್.ಜಿ.ವ್ಯಸನಿಗಳ ಪುನಶ್ವೇತನ ಕೇಂದ್ರದಲ್ಲಿ ಧ್ವನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ,ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ  ಅವರು ಮಾತನಾಡಿದರು

ವ್ಯಸನಗಳು ಯುವಜನರನ್ನು ಹಾಳು ಮಾಡುತ್ತಿವೆ, ಆದ್ದರಿಂದ ಮೊಬೈಲ್ ಆನ್ಲೈನ್ ಗೇಮ್ ಅನ್ನು ನಿಷೇಧಿಸಲು ಒತ್ತಾಯಿಸಬೇಕು, ಇದು ದೇಶದಲ್ಲಿ ಕೆಟ್ಟ ಪರಿಣಾಮವನ್ನು ಬೀರುತ್ತಿದೆ ಎಂದರು.

ಮಾದಕ ವಸ್ತುಗಳು ಯುವಜನರಿಗೆ ಮಾರಕವಾಗಿ ಪರಿಣಮಿಸಿದ್ದು, ದುಶ್ಚಟದಿಂದ ದೂರವಾದರೆ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಎಸ್.ಎಸ್.ಕೋಮಲ್ ಕುಮಾರ್ ತಿಳಿಸಿದರು

ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಖಿನ್ನತೆಗೆ ಒಳಗಾಗುತ್ತಾರೆ.ಇದರಿಂದ ಮಕ್ಕಳ ಬೆಳೆವಣಿಗೆಯಲ್ಲಿ ಕುಂಠಿತಗೊಳ್ಳುವುದಲ್ಲದೇ ಕುಟುಂಬದ ಸ್ವಾಸ್ಥ್ಯ ಹಾಳಾಗುತ್ತದೆ. ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿಹೊಂದಲು ಸಾಧ್ಯವಾಗುವುದಿಲ್ಲ ಎಂದರು.

ಆದಿಚುಂಚನಗಿರಿ ವೈದ್ಯಕೀಯ ಮಹಾವಿಶ್ವವಿದ್ಯಾಲಯದ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಡಾ.ವಿಜಯ್ ಎಸ್.ಹೂಗಾರ್ ಅವರು ಮದ್ಯಪಾನದಿಂದಾಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಪೂರ್ಣಿಮ, ಭಾರತೀಶ್ ಆರ್ ಜಿ, ವ್ಯಸನಿಗಳ ಸಮಗ್ರ ಪುನಶ್ಚೇತನ ಕೇಂದ್ರದ ಯೋಜನಾ ನಿರ್ದೇಶಕಿ ಡಿ.ತೇಜಕುಮಾರಿ, ಕೃಷ್ಣೇಗೌಡ, ಪ್ರಸನ್ನ ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ