ಕೃಷ್ಣರಾಜಸಾಗರ ಅಣೆಕಟ್ಟೆ ನಿರ್ಮಾಣವಾದ 9 ದಶಕಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಕನ್ನಂಬಾಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜೂ.30) ಮಧ್ಯಾಹ್ನ ಬಾಗಿನ ಅರ್ಪಣೆ ಮಾಡಿದರು.
ಬೆಳಿಗ್ಗೆಯೇ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು, ಅಲ್ಲಿಂದ ಸಂಪುಟ ಸಹೋದ್ಯೋಗಿಗಳೊಂದಿಗೆ ಐರಾವತ ಬಸ್ ನಲ್ಲಿ ಕೆ.ಆರ್.ಎಸ್ ಗೆ ಆಗಮಿಸಿ ಬಾಗಿನ ಅರ್ಪಣೆ ಮಾಡಿದರು.

ಅವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹಾದೇವಪ್ಪ, ಶ್ರೀರಂಗಪಟ್ಟಣದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಮದ್ದೂರು ಶಾಸಕ ಉದಯ್ ಸೇರಿದಂತೆ ಹಲವರು ಭಾಗವಹಿಸಿದ್ದರು.




