Saturday, November 21, 2026

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಎಲ್ಲಾ ಜಲಾಶಯಗಳು ಭರ್ತಿ ; ಚಲುವರಾಯಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದಾಗ ರಾಜ್ಯ ಬರಗಾಲ ಪೀಡಿತವಾಗುತ್ತದೆ ಎಂದು ವಿಪಕ್ಷಗಳು ಹಾಗೂ ಕೆಲವು ಜನರು ಟೀಕಿಸುತ್ತಾ ಬರುತ್ತಿದ್ದರು, ಆದರೆ ಇಂದು ಇದೆ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಜಲಾಶಯಕ್ಕೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಬಾಗಿನ ಅರ್ಪಿಸಿ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರವು ಸದಾ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸದಲ್ಲಿ ನಿರತವಾಗಿದೆ. ಆದರೆ ಅದನ್ನು ಪ್ರಚಾರ ಮಾಡುವ ಕೆಲಸದಲ್ಲಿ ಹಿಂದುಳಿದಿದೆ ಎಂದರು.

ಪಂಚ ಗ್ಯಾರಂಟಿಗಳನ್ನು ಸರ್ಕಾರ ಘೋಷಿಸಿದ ಸಂದರ್ಭದಲ್ಲಿ ವಿಪಕ್ಷಗಳು ಆರ್ಥಿಕ ಸ್ಥಿತಿಗತಿ ತಿಳಿಯದೆ ಸರ್ಕಾರ ಗ್ಯಾರಂಟಿ ಘೋಷಿಸಿದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದು ಕಷ್ಟ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಟೀಕೆ ವ್ಯಕ್ತಪಡಿಸಿದರು.ಆದರೆ ಇಂದು ಪಂಚ ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಪಂಚ ಗ್ಯಾರಂಟಿಗಳು ಯಶಸ್ವಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ 16 ವರ್ಷಗಳ ಆಯವ್ಯಯ ಮಂಡನೆಯ ಅನುಭವದೊಂದಿಗೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಕಂಡಿದೆ ಎಂದರು.

93 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದೆ, ಇದು ಸಂತಸದ ವಿಷಯವಾಗಿದೆ. ಕೆ.ಆರ್.ಎಸ್ ನೊಂದಿಗೆ ಎಲ್ಲಾ ಜಲಾಶಯಗಳು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇದು ಸಂತೋಷದ ವಿಷಯವಾಗಿದೆ ಎಂದರು.

ಕೃಷಿ ಪ್ರಧಾನ ಜಿಲ್ಲೆಯಾದ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯವನ್ನು ಸರ್ಕಾರ ನೀಡಿದೆ ಹಾಗೂ ಆದಿಚುಂಚನಗಿರಿಯಲ್ಲಿ ಖಾಸಗಿ ಕೃಷಿ ಕಾಲೇಜು ಪ್ರರಂಭಿಸಲು ಅನುಮತಿ ನೀಡಲಾಗಿದೆ ಎಂದರು.

ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ ಈ ದಿನ ರಾಜ್ಯದ ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ದಿನವಾಗಿದೆ. ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ