Friday, November 20, 2026

ಪ್ರಾಯೋಗಿಕ ಆವೃತ್ತಿ

ಎಲ್ಲಾ ನಾಲೆಗಳಿಗೂ ತಕ್ಷಣದಿಂದಲೇ ನೀರು ಹರಿಸಿ ; ಸಿಎಂ ಸಿದ್ದರಾಮಯ್ಯ

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ಆದೇಶ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 25 ಸಾವಿರ ಕೋಟಿ ಅನುದಾನ ನೀರಾವರಿ ಇಲಾಖೆಗೆ ನೀಡಿದೆ. ಹಿಂದಿನ ಯಾವ ಸರ್ಕಾರವೂ ಈ ಮಟ್ಟದ ಅನುದಾನ ನೀಡಿಲ್ಲ, ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ ಎಂದರು.

ಸ್ಮಾರಕ ನಿರ್ಮಿಸಿ

92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ಕೃಷ್ಣರಾಜಸಾಗರದ ಒಟ್ಟು 124 ಅಡಿಯದಾಗಿದ್ದು, 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 93 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ಪ್ರಕೃತಿಯ ನಿಯಮದಂತೆ ಎಲ್ಲಾ ನಡೆಯುತ್ತದೆ.ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಕಾವೇರಿ ಜಲಾನಯನ ಪ್ರದೇಶದ ನಾಲೆ, ಅಣೆಕಟ್ಟು ಹಾಗೂ ಇತರೆ ಅಭಿವೃದ್ಧಿಗಾಗಿ ಕಾವೇರಿ ನೀರವಾರಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಅಧಿಕಾರದಲ್ಲಿದ್ದಾಗ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ