ವಿಶೇಷ ಚೇತನರು ಸಮಾಜದಲ್ಲಿ ಗುರುತಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕೆಂಬ ಸದುದ್ದೇಶದಿಂದ ಸಾಧನ ಸಲಕರಣೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಉನ್ನತ ಸ್ಥಾನ ತಲುಪಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಅಲಿಂಕೋ ಸಂಸ್ಥೆ ಪ್ರಾದೇಶಿಕ ಕೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಡ್ಯ ನಗರದ ಗುರುಭವನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜವು ಎಂದಿಗೂ ವಿಶೇಷ ಚೇತನರನ್ನು ಪ್ರೋತ್ಸಾಹಿಸುವಲ್ಲಿ ಮುಂದಿರಬೇಕು. ಅವರ ಶಕ್ತಿಯನ್ನು ಕುಗ್ಗಿಸುವವಂತಹ ನುಡಿಗಳನ್ನು ಆಡಬಾರದು. ವಿಶೇಷ ಚೇತನರ ಅಭಿವೃದ್ಧಿಗಾಗಿ ಸಹಕರಿಸಿ ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಕೆ. ಆರ್ ನಂದಿನಿ ಮಾತನಾಡಿ ವಿಶೇಷ ಚೇತನರು ಸಾಮನ್ಯರಿಕಿಂತಲೂ ವೈಶಿಷ್ಟವಾಗಿ ಬದುಕಬೇಕೆಂಬ ಬಯಕೆಯಿಂದ ಜಿಲ್ಲೆಯಲ್ಲಿ ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿಕಲಚೇತನರ ತಪಾಸಣೆ ಶಿಬಿರ ಯಶಸ್ವಿ ಹೊಂದಲು ಸಹಕರಿಸಿದ ವಿಶೇಷಚೇತನರ ಆರೈಕೆಗಾರರನ್ನು ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ಅಂಗವೈಫಲ್ಯಯತೆಯಿಂದ ಜೀವನ ನಡೆಸುತ್ತಿರುವವನ್ನು ಗುರಿತಿಸಿ ಅವರಿಗೆ ಅನುಕೂಲವಾಗಲು ಸಾಧನ ಸಲಕರಣೆಗಳನ್ನು ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ಕೋಮಲ್ ಕುಮಾರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಚ್. ಶಿವರಾಮೇಗೌಡ, ಜಿಲ್ಲಾ ಉಪ ಸಮನ್ವಯ ಅಧಿಕಾರಿಗಳಾದ ಚಂದ್ರಶೇಖರ್, ಪ್ರೇರಣ ಅಂಗವಿಕಲರ ಸಂಸ್ಥೆಯ ರವಿಕುಮಾರ್ ಹಾಜರಿದ್ದರು.




