Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪೊಲೀಸ್ ಠಾಣೆ ವಿಚಾರದಲ್ಲಿ ಶಾಸಕರು ರಾಜಕಾರಣ ಮಾಡಿಲ್ಲ ; ಕೆಂಪೂಗೌಡ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕ್ಯಾತನಹಳ್ಳಿ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸುವ ಆದೇಶವನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಖಂಡಿಸಿದ್ದು, ಹಲವು ವರ್ಷಗಳ ಪ್ರಯತ್ನದ ಫಲದಿಂದ ಸದರಿ ಆದೇಶ ದೊರೆತಿದೆ ಹೊರತು, ಕ್ಷೇತ್ರದ ಶಾಸಕರು ಯಾವುದೇ ರಾಜಕಾರಣ ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಸ್ಪಷ್ಟನೆ ನೀಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾತನಹಳ್ಳಿ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸುವ ಸಂಬಂಧ ೨೦೧೭ರಲ್ಲೇ ಶಾಸಕ ಪುಟ್ಟಣ್ಣಯ್ಯ ಅವರು ಮನವಿ ಸಲ್ಲಿಸಿದ್ದು, ಹಂತ ಹಂತವಾಗಿ ಹೋರಾಟ ನಡೆಸಿದ ಪ್ರಯತ್ನಗಳ ಫಲವಾಗಿ ಈಗ ಅನುಮೋದನೆ ದೊರೆತಿದೆ ಎಂದರು.

ಸದರಿ ಅನುಮೋದನೆ ಪಡೆಯಲು ೨೦೨೪ರ ಡಿಸೆಂಬರ್ ನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಮೇರೆಗೆ ಪರಿಶೀಲನೆ ಮಾಡಲಾಗಿದ್ದು, ಕೇಂದ್ರ ಸಚಿವರ ಶಿಫಾರಸ್ಸಿನ ಮೇರೆಗೆ ಕ್ಯಾತನಹಳ್ಳಿ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸುವ ಆದೇಶವನ್ನು ಚಿನಕುರಳಿ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸುವಂತೆ ತಿರುಚಲಾಗಿದೆ. ಇದು ಸರ್ಕಾರ ಮಟ್ಟದಲ್ಲಿ ಆಗಿರುವ ಲೋಪವಾಗಿದೆ. ಅದನ್ನು ಸರಿಪಡಿಸಿ ಮರು ಆದೇಶ ನೀಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿನ ರೈತರ ಬೆಳೆಗಳಿಗೆ ನೀರು ಹರಿಸುವಂತೆ ನೀರಾವರಿ ಇಲಾಖೆಗೆ ಮನವಿ ಮಾಡಿದ್ದು, ಇನ್ನೂ ೧೫ ದಿನಗಳವರೆಗೂ ನೀರು ಹರಿಸಲಾಗುವುದಿಲ್ಲ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಕೂಡಲೇ ರೈತರ ಬೆಳೆಗೆ ನೀರು ಹರಿಸಲು ಸರ್ಕಾರ ಮುಂದಾಗುವಂತೆ ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕೆ.ಟಿ.ಗೋವಿಂದೇಗೌಡ, ಕೆ.ಆರ್.ರವೀಂದ್ರ, ವಿಜಯ್‌ಕುಮಾರ್, ಮಂಜುನಾಥ್, ಶಂಕರ್, ಆನಂದ್, ರಘು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ