Wednesday, November 18, 2026

ಪ್ರಾಯೋಗಿಕ ಆವೃತ್ತಿ

ಗೂಂಡಾ ಕಾಯ್ದೆಯಡಿ ಪರಪ್ಪನ ಅಗ್ರಹಾರ ಜೈಲು ಸೇರಿದ ಮಂಡ್ಯದ ರೌಡಿ

ಮಂಡ್ಯ ಗ್ರಾಮಾಂತರ ಮತ್ತು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಂಡ್ಯದ ರೌಡಿಯೊಬ್ಬನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕೇಂದ್ರ ಕಾರಾಗೃಹ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡ್ಯ ತಾಲ್ಲೂಕು ಬಸರಾಳು ಹೋಬಳಿಯ ಗೂಳಿಕೊಪ್ಪಲು ಗ್ರಾಮದ ಶಶಿಕುಮಾರ್ ಅಲಿಯಾಸ್ ಚಿನ್ನು ಅಲಿಯಾಸ್ ಜಿಂಕೆ ಬಿನ್ ಕೃಷ್ಣಗೌಡ (28 ವರ್ಷ) ಪರಪ್ಪನ ಅಗ್ರಹಾರ ಜೈಲು ಸೇರಿದವನು.

ಈತ ತನ್ನ ಸಹಚರರೊಂದಿಗೆ ಸತತವಾಗಿ ರೌಡಿ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದು, ಈತನ ವಿರುದ್ಧ ಕೆರಗೋಡು, ಮಂಡ್ಯ ಗ್ರಾಮಾಂತರ ಮತ್ತು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿದ್ದವು, ಆದ್ದರಿಂದ ಈತನ ರೌಡಿ ಚಟುವಟಿಕೆಯನ್ನು ನಿಯಂತ್ರಣದಲ್ಲಿಡಲು ಮಂಡ್ಯ ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ