Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜೀವನದಲ್ಲಿ ಜಿಗುಪ್ಸೆ ; ತಾಯಿ-ಮಗಳು ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ- ಮಗಳು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ನೆಹರು ನಗರ ಬಡಾವಣೆಯ ಮನೆಯೊಂದರಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಮೂಲತಃ ಬೆಂಗಳೂರಿನವರಾದ ರಶ್ಮಿ (28 ವರ್ಷ) ಹಾಗೂ ಆಕೆ ಮಗಳು ದಿಶಾ (9 ವರ್ಷ) ಆತ್ಮಹತ್ಯೆಗೆ ಶರಣಾದವರು.

ಗಂಡನಿಂದ ದೂರವಿದ್ದ ರಶ್ಮಿ ಮಂಡ್ಯದ ಜೈನ್ ಆಪ್ಟಿಕಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಈಕೆ ಒಂಟಿತನದಿಂದ ಜಿಗುಪ್ಸೆಗೊಂಡು ತನ್ನ ಮಗಳೊಂದಿಗೆ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಶವಗಳನ್ನು ಮಿಮ್ಸ್ ಗೆ ಸಾಗಿಸಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ