Saturday, November 21, 2026

ಪ್ರಾಯೋಗಿಕ ಆವೃತ್ತಿ

ತಳಮಟ್ಟದಿಂದ ಬಿಜೆಪಿ ಸಂಘಟಿಸಲು ಸನ್ನದ್ಧರಾಗಿ

ಜಿಲ್ಲೆಯಲ್ಲಿ ತಳಮಟ್ಟದಿಂದ ಸದೃಢವಾಗಿ ಬಿಜೆಪಿ ಪಕ್ಷ ಸಂಘಟಿಸಲು ಸನ್ನದ್ಧರಾಗಿ ಎಂದು ಕಂದಾಯ ಸಚಿವ ಆರ್.ಅಶೋಕ್ ಕಾರ್ಯಕರ್ತರಿಗೆ ಕರೆ ನೀಡಿದರು.

ಮಂಡ್ಯ ನಗರದ ನೆಹರು ನಗರದಲ್ಲಿರುವ ಬಿಜೆಪಿ ಮುಖಂಡ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್‌ ಜಯರಾಂ ಅವರ ಮನೆಗೆ ಗುರುವಾರ ಸಂಜೆ ಭೇಟಿ ನೀಡಿ ಮಾಜಿ ಶಾಸಕಿ ಪ್ರಭಾವತಿ ಮತ್ತು ಅಶೋಕ್‌ ಜಯರಾಂ ಜೊತೆ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿದರು.

ಜಿಲ್ಲೆಯಲ್ಲಿನ ಕ್ಷೇತ್ರ ವ್ಯಾಪ್ತಿ ಬಿಜೆಪಿ ಗೆಲ್ಲಲು ಪ್ರಬಲ ಸಂಘಟನೆ ಅವಶ್ಯಕವಿದೆ.ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಇಂದಿನಿಂದಲೇ ಕಾರ್ಯೋನ್ಮುಖರಾಗಿ ಎಂದರು.

ಬಳಿಕ ಮಾತನಾಡಿದ ಬಿಜೆಪಿ ಯುವನಾಯಕ ಅಶೋಕ್‌ ಜಯರಾಂ ಅವರು, ಮೈಸೂರು ಪ್ರಾಂತ್ಯ ವ್ಯಾಪ್ತಿಯಲ್ಲಿ ಬಿಜೆಪಿ ಗೆಲುವಿಗೆ ಎಲ್ಲಾ ನಾಯಕರು ಶ್ರಮಿಸುತ್ತಿದ್ದಾರೆ. ಅದೇ ರೀತಿ ಮಂಡ್ಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಅವರು ನಮ್ಮ ಮನೆಗೂ ಭೇಟಿ ನೀಡಿ ನನ್ನ ತಾಯಿ ಪ್ರಭಾವತಿ ಜಯರಾಂ ಮತ್ತು ನನ್ನೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿ, ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪಾಂಡವಪುರ ಇಂದೇಶ್, ಮದ್ದೂರು ಸ್ವಾಮಿ, ಇಂಡವಾಳು ಸಚ್ಚಿದಾನಂದ, ಬಿಜೆಪಿ ನಗರಾಧ್ಯಕ್ಷ ವಿವೇಕ್, ಮುಡಾ ನಿರ್ದೇಶಕ ಪುಟ್ಟರ್‌ಮಲ್‌ಜೈನ್, ಗ್ರಾ.ಪಂ.ಸದಸ್ಯ ಅನಿಲ್, ರವಿ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ