ಮಂಡ್ಯ ನಗರದ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯವು ಆರಂಭವಾಗಿ 50 ವರ್ಷಗಳು ಪೂರೈಸಿರುವ ಸುಸಂದರ್ಭದ ಹಿನ್ನಲೆಯಲ್ಲಿ ಸುವರ್ಣ ಮಹೋತ್ಸವ ಆಚರಣೆ ಸಮಾಲೋಚನೆ ಸಂಬಂಧ ಜು.5ರಂದು ಹಳೆಯ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ.’

ಅಂದು ಮಧ್ಯಾಹ್ನ 2.30ಕ್ಕೆ ಕಾಲೇಜಿನ ಆವರಣದಲ್ಲಿ ಸಭೆ ಆರಂಭಗೊಳ್ಳಲಿದೆ. ಸುವರ್ಣ ಮಹೋತ್ಸವ ಸಂಭ್ರಮ ಸಂಬಂಧ ಎಲ್ಲ ಹಿರಿಯ ವಿದ್ಯಾರ್ಥಿಗಳು ಆಗಮಿಸಿ ಸಲಹೆ-ಸೂಚನೆ ನೀಡಬೇಕೆಂದು ಪ್ರಾಂಶುಪಾಲರೂ ಆದ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ.ವಿ.ಡಿ.ಸುವರ್ಣ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.




