Sunday, November 22, 2026

ಪ್ರಾಯೋಗಿಕ ಆವೃತ್ತಿ

ದೇವನಹಳ್ಳಿ ಭೂಸ್ವಾಧೀನ | ಕಾನೂನು ತೊಡಕು ನಿವಾರಿಸಿ ಮೊತ್ತೊಮ್ಮೆ ರೈತರ ಸಭೆ ; ಸಿಎಂ ಸಿದ್ದರಾಮಯ್ಯ

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೊಮೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.

nudikarnataka.com

ನಂತರ ಮಾತನಾಡಿದ ಅವರು ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ  ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯ ಮುಖ್ಯಾಂಶಗಳೇನು ?

•ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.

•ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

•ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.

•ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು.

•ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರ ಮಾಡಿಲ್ಲ. ನಾನೂ ರೈತ ಸಂಘದಲ್ಲಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾನೂನು ಸಲಹೆಗಾರ ಪೊನ್ನಣ್ಣ, ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ