ಕೌಶಲ್ಯ ಚಾರಿಟಬಲ್ ಟ್ರಸ್ಟ್ ಮತ್ತು ಕೌಶಲ್ಯ ಅಲಯನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ‘ಶುದ್ಧ ಕುಡಿಯುವ ನೀರಿನ ಅಭಿಯಾನ ‘ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡ್ಯ ತಾಲೂಕಿನ ಮಂಗಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೊದಲ ಶುದ್ಧ ನೀರಿನ ಯಂತ್ರ ವಿತರಣೆ ಮಾಡುವ ಮೂಲಕ ನೆರವೇರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಧಿಕಾರಿ ಮಹದೇವು ಉದ್ಘಾಟನೆ ಮಾಡಿದರು.

ಕಾರ್ಯಕ್ರದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ರಾಜಶೇಖರ್,ಅಲಯನ್ಸ್ ನ 2ನೇ ರಾಜ್ಯಪಾಲ ಚಂದ್ರಶೇಖರ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅನಿಲ್ ರಾಜ್, ಕೌಶಲ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್. ರಮೇಶ್ , ಉಪಾಧ್ಯಕ್ಷ ಡಾ.ಆದಿತ್ಯ, ಕಾರ್ಯದರ್ಶಿ ರಕ್ಷಿತ್ ರಾಜ್, ಸದಸ್ಯರಾದ ನಂದಿನಿ, ಪ್ರಭುಸ್ವಾಮಿ, ರವಿ, ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಗೌಡ ಮತ್ತಿತರರು ಉಪಸ್ಥಿತರಿದ್ದರು.




