ಮಂಡ್ಯ ತಾಲ್ಲೂಕಿನ ಶಿವಳ್ಳಿಯಿಂದ ಪಾಂಡವಪುರಕ್ಕೆ ಹೋಗುವ ಮಾರ್ಗ ಮಧ್ಯೆ ಹಾಡ್ಯ ಗ್ರಾಮದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಉರುಳಿ ಬಿದ್ದು ಸುಮಾರು 30 ಜನ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಬಸ್ ಚಲಿಸುವಾಗ ಎದುರಿನಿಂದ ಬಂದ ಕಾರಿಗೆ ಜಾಗ ಬಿಡಲು ಎಡಕ್ಕೆ ತಿರುಗಿದಾಗ ಬಸ್ಸು ನಿಯಂತ್ರಣಕ್ಕೆ ಸಿಗದೇ ರಸ್ತೆ ಪಕ್ಕದಲ್ಲಿದ್ದ ಜಮೀನಿಗೆ ಉರುಳಿ ಬಿದ್ದಿದೆ, ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಯಾವುದೇ ಪ್ರಯಾಣಿಕರಿಗೆ ಗಂಭೀರ ಪ್ರಮಾಣದ ಗಾಯಗಾಳಾಗಿರುವ ಬಗ್ಗೆ ತಿಳಿದು ಬಂದಿದೆ, ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನು ಮಂಡ್ಯ ಜಿಲ್ಲಾಸ್ಪತ್ರೆ ರವಾನಿಸಲಾಗಿದೆ. ಶಿವಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.




