Sunday, November 22, 2026

ಪ್ರಾಯೋಗಿಕ ಆವೃತ್ತಿ

ಒಬಿಸಿ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಅಧ್ಯಕ್ಷರಲ್ಲ, ಸದಸ್ಯರಲ್ಲಿವೊಬ್ಬರು ; ಸಿಎಂ ಕಚೇರಿ ಸ್ಪಷ್ಟನೆ

ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಗೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಸಿಎಂ ಕಚೇರಿ ಅಲ್ಲಗಳೆದಿದೆ.

ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು ಎಂದು ಭಾನುವಾರ ಸ್ಪಷ್ಟಪಡಿಸಿದೆ.

ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಡಾ.‌ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯ ಆತಿಥ್ಯವನ್ನು ಸಿಎಂ ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ ಎಂದು ಸಿಎಂ ಕಚೇರಿ ತಿಳಿಸಿದೆ.

ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ