Friday, November 20, 2026

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳದಲ್ಲಿ ಸರಣಿ ಅತ್ಯಾಚಾರ – ಕೊಲೆ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ನ್ಯಾಯಾಲಯಕ್ಕೆ ಹಾಜರಾದ ದೂರುದಾರ

ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ವ್ಯಕ್ತಿ ಪೊಲೀಸ್‌ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ.

ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ ಈ ಹಿಂದೆ ಜೀವ ಬೆದರಿಕೆಯಿಂದ ಈ ಕೃತ್ಯ ಎಸಗಿದ್ದೆ ಆದರೆ ಈಗ ಪಾಪಪ್ರಜ್ಞೆ ಕಾಡಿದ ಆದ್ದರಿಂದ ಸಾಕ್ಷಿ ನೀಡಲು ಮುಂದಾಗಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ದೂರನ್ನು ಸಲ್ಲಿಸಿದ್ದರು.

“>

 

ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇಂದು(ಜುಲೈ 11) ದೂರುದಾರ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ. ದೂರುದಾರರ ಮನವಿಯಂತೆ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ. ಇನ್ನು ಅನಾಮಧೇಯ ದೂರುದಾರರ ಕೈಯಲ್ಲಿ ಕಪ್ಪು ಬ್ಯಾಗ್‌ ಕಾಣಿಸಿಕೊಂಡಿದ್ದು, ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ