Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಕಬ್ಬು ನುರಿಸುವಿಕೆಗೆ ಪ್ರಾಯೋಗಿಕ ಚಾಲನೆ

ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಪ್ರಸಕ್ತ ಸಾಲಿನ ಮೈಷುಗರ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವಿಕೆಗೆ ಸೋಮವಾರ ಪ್ರಾಯೋಗಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಜುಲೈ 16ರಂದು ನಿರಂತರವಾಗಿ ಕಬ್ಬು ನುರಿಸಲಾಗುವುದು. 14 ವರ್ಷಗಳ ನಂತರ ಒಪ್ಪಿಗೆ 4.50 ಲಕ್ಷ ಟನ್ ಒಪ್ಪಿಗೆ ಕಬ್ಬನ್ನು ಸೀನಿಯಾರಿಟಿ ಮೇಲೆ ಕಬ್ಬನ್ನು ನುರಿಸುತ್ತೇವೆ ಎಲ್ಲೂ ಕಡೆ ಗೊಂದಲಕ್ಕೆ ಅವಕಾಶವಿಲ್ಲ ಯಶಸ್ವಿಯಾಗಿ ಕನಿಷ್ಠ 4 ಲಕ್ಷ ಟನ್ ಕಬ್ಬನ್ನು ಅರೆಯುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೈಸೂರು ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಮಂಗಲ್ ದಾಸ್, ರೈತ ಮುಖಂಡರಾದ ಸುನಂದ ಜಯರಾಮ್, ಇಂಡುವಾಳು ಚಂದ್ರಶೇಖರ್, ಶಿವಳ್ಳಿ ಚಂದ್ರಶೇಖರ್, ವೇಣುಗೋಪಾಲ್, ಸಿದ್ದೇಗೌಡ, ಕಾಂಗ್ರೆಸ್ ಮುಖಂಡರಾದ ಸಿಎಂ ದ್ಯಾವಪ್ಪ, ಎಚ್ ವಿ ನಾಗರಾಜ್, ಅಂಜನ ಶ್ರೀಕಾಂತ್, ವೀಣಾ ಶಂಕರ್ ಸೇರಿದಂತೆ ಮತ್ತಿತರರು ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ