Tuesday, November 24, 2026

ಪ್ರಾಯೋಗಿಕ ಆವೃತ್ತಿ

ರೈತ ಹೋರಾಟಕ್ಕೆ ಐತಿಹಾಸಿಕ ಗೆಲುವು | ದೇವನಹಳ್ಳಿ ಭೂ ಸ್ವಾಧೀನವನ್ನು ಕೈಬಿಟ್ಟ ಸರ್ಕಾರ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದು ತಿಳಿಸಿದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದಲ್ಲಿದ್ದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ಧಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ