ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಡ್ಯ ಜಿಲ್ಲಾ ಶಾಖೆ ಹಾಗೂ ರಕ್ತ ನಿಧಿ ಕೇಂದ್ರ ಮೀಮ್ಸ್, ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಮಂಡ್ಯದ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ
ಭಾರತೀಯರ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಅವರು ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

ರಕ್ತದಾನವು ಸರ್ವಶ್ರೇಷ್ಠ ದಾನವಾಗಿದ್ದು, ರಕ್ತದಾನಕ್ಕೆ ಬೇರೇ ಯಾವುದೇ ಬಗೆಯ ಪರ್ಯಾಯ ಮಾರ್ಗವು ಇಲ್ಲವಾಗಿದ್ದು, ವೈದ್ಯಕೀಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ರಕ್ತದಾನವನ್ನು ಮಾಡುವುದರ ಮೂಲಕ ಒಂದು ಜೀವವನ್ನು ಉಳಿಸುವುದಕ್ಕೆ ಸಹಕರಿಸಬೇಕೆಂದು ತಿಳಿಸಿದರು.
ಬ್ಲಡ್ ಬ್ಯಾಂಕಿನಲ್ಲಿ ರಕ್ತದ ಶೇಖರಣೆ ಕಡಿಮೆಯಾಗಿದ್ದು, ಹೀಗಾಗಿ ರಕ್ತದಾನವನ್ನು ಮಾಡುವುದಕ್ಕೆ ಮುಂದೆ ಬರಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಮುರಳೀದರ್ ಭಟ್, ಸಿಬ್ಬಂದಿ ವರ್ಗದವರಾದ ಹುಸೇನ್, ಡಾ. ಗಾಯತ್ರಿ, ರೆಡ್ ಕ್ರಾಸ್ ಸಂಸ್ಥೆಯ ರಂಗಸ್ವಾಮಿ, ರಾಮು ಇನ್ನಿತರರಿದ್ದರು.




