Thursday, November 19, 2026

ಪ್ರಾಯೋಗಿಕ ಆವೃತ್ತಿ

ಇಂಡೋನೇಷ್ಯಾದಲ್ಲಿ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ವೀಕ್ಷಿಸಿದ ನಾರಾಯಣಗೌಡ

ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಫಿಬಾ ಏಷ್ಯಾ ಬ್ಯಾಸ್ಕೆಟ್ ಬಾಲ್ ಚಾಂಪಿಯನ್‌ಶಿಪ್ ಸೆಮಿಫೈನಲ್‌ ಪಂದ್ಯಾವಳಿಯನ್ನು ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ವೀಕ್ಷಿಸಿದರು.

ಇದೇ ಸಂದರ್ಭದಲ್ಲಿ ಇಂಟರ್ ನ್ಯಾಷನಲ್‌ ಬ್ಯಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷರಾದ ಹಮ್ನೆ ನಿಯಂಗ್ ಅವರೊಂದಿಗೆ ಸಚಿವ ಡಾ.ನಾರಾಯಣಗೌಡ ಸೆಪ್ಟೆಂಬರ್ 4 ರಿಂದ 11 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಏಷ್ಯಾ ವುಮೆನ್ಸ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್‌ಶಿಪ್ ಬಗ್ಗೆ ಚರ್ಚೆ ನಡೆಸಿದರು.

ಈ ಕ್ರೀಡಾಕೂಟಕ್ಕೆ ಕರ್ನಾಟಕ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ,ಯಾವ ಕೊರತೆಯೂ ಬಾರದಂತೆ ಅತ್ಯುತ್ತಮವಾಗಿ ಆಯೋಜನೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಇಂಡಿಯನ್ ಬ್ಯಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷ ಕೆ ಗೋವಿಂದರಾಜು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ