Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಚಿನ್ನಾಭರಣ ದೋಚಲು ಸಂಚು ರೂಪಿಸಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಮಂಡ್ಯದ ಪ್ರದಾನ ಜಿಲ್ಲಾ ಸತ್ರ ನ್ಯಾಯಾಧೀಶ ಜೆ.ಎನ್‌.ಸುಬ್ರಹ್ಮಣ್ಯ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ತಮಿಳುನಾಡಿನ ಆನಂದ ಹಾಗೂ ಆಕೆಯ ಪತ್ನಿ ಆನಂದಿ ಶಿಕ್ಷೆಗೊಳಗಾದವರು.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ ಪಾಳ್ಯಂ ನಿವಾಸಿ ತಿರುಮಲೈಸ್ವಾಮಿ ಎಂಬುವರ ಪತ್ನಿ ರಜಾತಿ ಅಲಿಯಾಸ್ ಆರೋಗ್ಯಮೇರಿ ಅವರನ್ನು 26.05.2012 ರಂದು ಆನಂದ ಮತ್ತು ಆತನ ಪತ್ನಿ ಆನಂದಿ ಇಬ್ಬರೂ ಸೇರಿ ಕರ್ನಾಟಕದ ಕನಕಪುರ ಬಳಿ ಇರುವ ಕಬ್ಬಾಳಮ್ಮ ದೇವಾಲಯಕ್ಕೆ ಹೋಗೋಣ ಎಂದು ಕರೆ ತಂದಿದ್ದಾರೆ. ರಜಾತಿ ಅವರ ಮೈ ಮೇಲಿದ್ದ ಚಿನ್ನದ ಒಡವೆಗಳನ್ನು ದೋಚುವ ಸಂಚು ರೂಪಿಸಿದ ಆನಂದ ಮತ್ತು ಆನಂದಿ ಕಬ್ಬಾಳಮ್ಮನ ದೇವಸ್ಥಾನಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಆಕೆಗೆ ಚೆನ್ನಾಗಿ ಮದ್ಯಪಾನ ಮಾಡಿಸಿಕೊಂಡು ಮಳವಳ್ಳಿ ತಾಲ್ಲೂಕಿನ ಧನಗೂರು ಬಳಿ ಇರುವ ಕುರಿ ಫಾರಂ ಕಡೆಗೆ ಹೋಗುವ ರಸ್ತೆಯಲ್ಲಿರುವ ನೀలಗಿರಿ ಜಮೀನಿನ ಒಳಗೆ ಕರೆದುಕೊಂಡು ಹೋಗಿದ್ದಾರೆ. ರಜಾತಿ ಅವರು ನೀಲಗಿರಿ ತೋಪಿನಲ್ಲಿ ಮಲಗಿದ್ದ ಸಂದರ್ಭದಲ್ಲಿ ಆನಂದ ಮತ್ತು ಅನಂದಿ ಇಬ್ಬರೂ ಸೇರಿಕೊಂಡು ಅವರ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಆಕೆಯ ಮೈ ಮೇಲಿದ್ದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದರು.ರಜಾತಿ ಕೊಲೆಯಾದ ಬಗ್ಗೆ ಆಕೆಯ ಪತಿ ತಿರುಮಲೈಸ್ವಾಮಿ ಹಲಗೂರು ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಕಲಂ 302 ರೆ.ವಿ.34 ಐಪಿಸಿ ಕಾನೂನಿನಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿ,ಮಂಡ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಕೆ.ಎಂ.ದೊಡ್ಡಿ ವೃತ್ತ ನಿರೀಕ್ಷಕರಾಗಿದ್ದ ಹಾಲಿ ಮಂಡ್ಯ ಜಿಲ್ಲಾ ಅಪರ ಪೊಲೀಸ್ ಅಧೀಕ್ಷಕರಾಗಿರುವ ಎಸ್.ಇ.ಗಂಗಾಧರಸ್ವಾಮಿರವರು ತನಿಖೆ ಕೈಗೊಂಡು ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಅದರಂತೆ 16.7.2025 ರಂದು ಮಂಡ್ಯದ ಪ್ರದಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಅವರು ರಜಾತಿ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಆನಂದ ಹಾಗೂ ಆನಂದಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ