Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಖಾಸಗಿ ಶಾಲೆಗಳಲ್ಲಿ ಅಧಿಕ ಶುಲ್ಕ ವಸೂಲಿ ಆರೋಪ

ಮಂಡ್ಯ ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಶುಲ್ಕ ಪ್ರಕಟಿಸದೇ ಅಧಿಕವಾಗಿ ಶುಲ್ಕ ವಿಧಿಸುವ ಮೂಲಕ ಭ್ರಷ್ಟಾಚಾರ ನಡೆಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಸತ್ಯಶೋಧ ಸಮಿತಿ ರಚಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಸಾರ್ವಜನಿಕ ವೇದಿಕೆಯ ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ರಹಿತ ಖಾಸಗಿ ಶಾಲೆಗಳು ತರಗತಿವಾರು ಶುಲ್ಕವನ್ನು ಆನ್‌ಲೈನ್‌ನಲ್ಲಿ ಹಾಗೂ ಶಾಲೆಯ ಆವರಣದಲ್ಲಿ ಗೋಚರಿಸುವಂತೆ ೬ X ೧೦ ಅಡಿಯ ಬ್ಯಾನರ್‌ನಲ್ಲಿ ಮುದ್ರಿಸಿ ಪ್ರಕಟಿಸಬೇಕೆಂಬ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿದ್ದಾರೆ ಎಂದರು.

ರಾಜ್ಯದಲ್ಲಿ ಅನುಮತಿ ಪಡೆಯದೇ ೧೬೦೦ ನಡೆಸಲಾಗುತ್ತಿರುವ ಬಗ್ಗೆ ಶಿಕ್ಷಣ ಇಲಾಖೆಯೇ ತಿಳಿಸಿದ್ದು, ಈ ಸಂಬಂಧ ಕ್ರಮ ವಹಿಸಲು ಸರ್ಕಾರ ಮುಂದಾಗಬೇಕು. ನಿಯಮ ಪಾಲಿಸದ ಶಾಲೆಗಳ ಮೇಲೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೆ ಯಾವುದೇ ಕ್ರಮ ವಹಿಸುತ್ತಿಲ್ಲ, ಕೂಡಲೇ ಈ ಸಂಬಂಧ ಕ್ರಮ ವಹಿಸುವ ಸಲುವಾಗಿ ಸತ್ಯಶೋಧ ಸಮಿತಿ ರಚಿಸಿ ತನಿಖೆ ನಡೆಸಬೇಕು. ಶಾಲೆಗಳಲ್ಲಿ ಶುಲ್ಕ ಪ್ರಕಟಿಸಲು ಕ್ರಮ ಕೈಗೊಳ್ಳದ ಶಾಲೆಗಳಿಗೆ ೧ ಲಕ್ಷ ರೂ ದಂಡ ವಿಧಿಸಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ನಗರ ಕಾರ್ಯದರ್ಶಿ ಕೇಶವ್, ಸುನೀಲ್, ಪ್ರವೀಣ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ