ಪೌರ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ೪೫ ವರ್ಷಗಳಿಂದ ಶ್ರಮಿಸುತ್ತಿರುವ ಮೈಸೂರಿನ ಮಾಜಿ ಮೇಯರ್ ನಾರಾಯಣ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯತ್ವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಭಾದ ರಾಜ್ಯ ಕಾರ್ಯದರ್ಶಿ ಮದ್ದೂರು ಶ್ರೀನಿವಾಸ್ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕ ಸಮುದಾಯವನ್ನು ರಾಜ್ಯಾದ್ಯಂತ ಸಂಘಟನೆ ಮಾಡುವ ಮೂಲಕ ಹಲವು ಹೋರಾಟ ಮಾಡಿ, ಪೌರಕಾರ್ಮಿಕರ ಗುತ್ತಿಗೆ ರದ್ದು ಮಾಡಿ ಖಾಯಂ ಆಗಲು ನಾರಾಯಣ ಅವರು ಶ್ರಮಿಸಿದ್ದಾರೆ ಎಂದರು.
ಕಳೆದ ೪೦ ವರ್ಷಗಳಿಂದ ಸಮುದಾಯಕ್ಕೆ ಜೀವನವನ್ನು ಮುಡಿಪಾಗಿಟ್ಟು, ಪೌರಕಾರ್ಮಿಕರ ನಿರಂತರ ಏಳಿಗೆಗಾಗಿ ದುಡಿಯುತ್ತಿರುವ ನಾರಾಯಣ ಅವರು ಇದುವರೆಗೂ ವಿಧಾನ ಸಭೆ ಅಥವಾ ವಿಧಾನ ಪರಿಷತ್‌ಗೆ ಆಯ್ಕೆಯಾಗದೇ ಇದ್ದು ಅವರನ್ನು ಕಾಂಗ್ರೆಸ್ ಪಕ್ಷ ವಿಧಾನಪರಿಷತ್ ಸದಸ್ಯತ್ವ ಸ್ಥಾನ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಗಣೇಶ್, ಜಿಲ್ಲಾ ಕಾರ್ಯದರ್ಶಿ ಎಂ.ಮಹದೇವ, ಪೌರಕಾರ್ಮಿಕ ಚಾಲಕರ ಸಂಘದ ಅಧ್ಯಕ್ಷ ರಂಗಸ್ವಾಮಿ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಸ್ ಸದಸ್ಯ ಎಂ.ಗಣೇಶ್ ಇದ್ದರು.




