ಡಾ.ಡಿ.ಶ್ರೀನಿವಾಸ್ ಅಭಿನಂದನಾ ಸಮಿತಿ ವತಿಯಿಂದ ಕರ್ನಾಟಕ ಸಂಘದ ಸಹಕಾರದೊಂದಿಗೆ ಪಿಇಎಸ್ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಡಿ.ಶ್ರೀನಿವಾಸ್-೮೫ ಸ್ನೇಹಶೀಲ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭವನ್ನು ಜುಲೈ ೨೦ರ ಬೆಳಿಗ್ಗೆ ೧೧ ಗಂಟೆಗೆ ಮಂಡ್ಯ ನಗರದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಡಿ.ಶ್ರೀನಿವಾಸ್ ಅವರಿಗೆ ೮೫ ವರ್ಷಗಳು ತುಂಬಲಿದ್ದು, ಜಿಲ್ಲೆಗೆ ಪ್ರಥಮ ಡಾಕ್ಟರೇಟ್ ಪದವಿ ಪಡೆದವರಾಗಿದ್ದಾರೆ ಎಂದರು.
ಡಾ.ಡಿ.ಶ್ರೀನಿವಾಸ್ ದಂಪತಿಗಳನ್ನು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವತ್ಥ್ನಾರಾಯಣ ಅಭಿನಂದಿಸಲಿದ್ದು, ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು, ಮೈಸೂರು ನಿವೃತ್ತ ಕುಲಪತಿ ಡಾ.ಕೆ.ಎಸ್.ರಂಗಪ್ಪ ಗ್ರಂಥ ಬಿಡುಗಡೆ ಮಾಡುವರು, ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶ್ಗೌಡ ಅಭಿನಂದನಾ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಮಾಜಿ ಅಧ್ಯಕ್ಷ ಟಿ.ತಿಮ್ಮೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಂ.ನಾಗರಾಜು ಉಪಸ್ಥಿತರಿರಲಿದ್ದಾರೆ ಎಂದು ವಿವರಿಸದಿರು.
ಗೋಷ್ಠಿಯಲ್ಲಿ ಹಿರಿಯ ಸಾಹಿತಿ ಜಿ.ಟಿ.ವೀರಪ್ಪ, ಸಮಿತಿಯ ಅಧ್ಯಕ್ಷ ಜಿ.ವಿ.ನಾಗರಾಜು, ಉಪಾಧ್ಯಕ್ಷರಾದ ಬಾಲಕೃಷ್ಣ.ಎಂ, ಬಸವರಾಜು.ಕೆ.ಎಸ್, ಕಾರ್ಯದರ್ಶಿ ಕೆ.ಬಿ.ಬಾಲಕೃಷ್ಣ ಇದ್ದರು.




