Thursday, November 19, 2026

ಪ್ರಾಯೋಗಿಕ ಆವೃತ್ತಿ

ಪಿಒಪಿ, ರಾಸಾಯನಿಕಯುಕ್ತ ಬಣ್ಣದ ಗಣೀಶ ಮೂರ್ತಿಗಳಿಗೆ ನಿಷೇಧ : ಜಿಲ್ಲಾಧಿಕಾರಿ

ನೀರಿನ ಮೂಲಗಳಾದ ಸಮುದ್ರ, ನದಿ, ತೊರೆ, ಹಳ್ಳ, ಬಾವಿಗಳ ನೀರು ಮಾಲಿನ್ಯವಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ. ಪಿ)ಯಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಂಡ್ಯ ಜಿಲ್ಲೆಯಾದ್ಯಂತ ಮಾರಾಟ ಮಾಡುವುದು ಹಾಗೂ ವಿಸರ್ಜಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ಪ್ಲಾಸ್ಟರ್ ಆಫ್ ಪ್ಯಾಂಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿದ ಗಣೀಶಗಳನ್ನು ವಶಪಡಿಸಿಕೊಂಡು ಶೀಲ್ ಮಾಡಿ, ಸ್ಥಳೀಯ ಆಡಳಿತ  ಹಾಗೂ ಪೋಲೀಸ್ ನೆರವಿನೊಂದಿಗೆ ಸ್ಥಳಾಂತರಿಸಲು ಹಾಗೂ ವೈಜ್ಞಾನಿಕ ಮತ್ತು ಗೌರವಯುತವಾಗಿ ವಿಲೇವಾರಿ ಮಾಡಲು ಸೂಚಿಸಿದ್ದಾರೆ.

ರಾಜ್ಯದಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಉಚ್ಛನ್ಯಾಯಾಲಯವ ಹೊರಡಿಸಿರುವ ಹಾಗೂ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದವರ ವಿರುದ್ದದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ / ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ / ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಸೂಚಿಸಿದ್ಧಾರೆ.

ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ. ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ / ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು. ಅಲ್ಲದೇ ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದ ಎಂದು ಸೂಚಿಸಿದ್ದಾರೆ.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ