Friday, November 20, 2026

ಪ್ರಾಯೋಗಿಕ ಆವೃತ್ತಿ

ದುಶ್ಚಟಗಳ ದಾಸರಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಆನಂದ್

ಯುವ ಜನಾಂಗ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮವಾದ ಶಿಕ್ಷಣದ ಆಯ್ಕೆ ಮಾಡಿಕೊಳ್ಳಬೇಕೆ ಹೊರತು ದುಶ್ಚಟಗಳ ದಾಸರಾಗಿ ಅವರ ಭವಿಷ್ಯದ ಜೊತೆಗೆ ದೇಶದ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದೆಂದು ಹಿರಿಯ ನ್ಯಾಯಾಧೀಶರಾದ ಎನ್. ಆನಂದ್ ತಿಳಿಸಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ವಿಜಯ ಕಾಲೇಜಿನ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಅಬಕಾರಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ನಡೆದ ‘ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ಅಬಕಾರಿ ಆಯುಕ್ತ ಡಾ.ನಾಗಶಯನ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮಾದಕ ವಸ್ತುಗಳತ್ತ ಯುವಜನರು ಆಕರ್ಷಿತರಾಗಿ ಅವರ ಆರೋಗ್ಯ, ಸಮಾಜದ ಸ್ವಾಸ್ಥ್ಯ ಹಾಳುಮಾಡಿ ಅಪಘಾತಗಳು, ಅನಾಹುತಗಳಿಗೆ ಕಾರಣವಾಗುತ್ತಿರುವ ಅಂಶಗಳ ಬಗ್ಗೆ ಸವಿವರವಾಗಿ ದೃಶ್ಯಗಳ ಮೂಲಕ ವಿವರಿಸಿದರು.

ತಿಮ್ಮರಾಜು ಅವರು ತಂಬಾಕು ಮುಕ್ತ ಜೀವನ ನಡೆಸಲು ವಿದ್ಯಾರ್ಥಿಗಳಿಗೆ ಕರೆ ನೀಡಿ ಕೋಟ್ಪಾ ಕಾಯಿದೆ ಬಗೆಗೆ ತಿಳಿಸಿ ಉತ್ತಮ ವಿದ್ಯಾವಂತರಾಗಿ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಡಿವೈಎಸ್ಇ ರಾಧಾಮಣಿ, ಜಿಲ್ಲಾ ಸಲಹೆಗಾರ ತಿಮ್ಮರಾಜು, ಶ್ರೀರಂಗಪಟ್ಟಣ ವಲಯದ ಅಬಕಾರಿ ಇನ್ಸ್ಪೆಕ್ಟರ್ ಪ್ರಫುಲ್ ಚಂದ್ರ ಹಾಗೂ ಸಿಬ್ಬಂದಿಗಳು, ಸರ್ಕಾರಿ ಅಭಿಯೋಜಕ ಶಿವನಂಜಯ್ಯ, ಕಾಲೇಜಿನ ಗೌರವ ಕಾರ್ಯದರ್ಶಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.

ಸರ್ಕಾರಿ ಅಭಿಯೋಜಕರಾದ ಶಿವನಂಜಯ್ಯ ಶಿಕ್ಷೆಯ ಬಗೆಗೆ ತಿಳಿಸಿದರೆ, ಡಿವೈಎಸ್ಇ ರಾಧಾಮಣಿ, ಮಾದಕ ಮುಕ್ತ ಜೀವನದ ಪ್ರತಿಜ್ಞಾ ವಿಧಿ ಭೋಧಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ