Friday, November 20, 2026

ಪ್ರಾಯೋಗಿಕ ಆವೃತ್ತಿ

ಸಚಿವರ ಮಧ್ಯಸ್ಥಿಕೆ : ಜಿ.ಪಂ. ಸಿಇಒ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಮನರೇಗಾ ಕೂಲಿ ಕಾರ್ಮಿಕರಿಗೆ ಕೆಲಸ ಹಾಗೂ ಮಂಡ್ಯ ಜಿಲ್ಲೆಯ ಪಂಚಾಯತ್ ರಾಜ್ ಆಡಳಿತ ಕುಸಿದಿರುವ ಕುರಿತು ಪ್ರಗತಿಪರ ಸಂಘಟನೆಗಳು ಜು.27ರಂದು ಆಯೋಜಿಸಲು ಉದ್ದೇಶಿದ್ದ “ನಂದಿನಿ ಓಡಿಸಿ, ಮಂಡ್ಯ ಉಳಿಸಿ” ಪ್ರತಿಭಟನೆಯನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಡ್ಯ ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಚರ್ಚಿಸಿ ಮುನ್ನಡೆಯೋಣ. ಜಿಪಂ ಸಮಸ್ಯೆ ಕುರಿತು ಆಗಸ್ಟ್ ಎರಡನೇ ವಾರದೊಳಗೆ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆ ಬಳಿಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು ಮಾತನಾಡಿ, ಜಿಲ್ಲೆಯ ಸಮಸ್ಯೆ ಹಾಗೂ ಸಮಗ್ರ ಅಭಿವೃದ್ಧಿ ಕುರಿತಂತೆ ಸಭೆ ನಡೆಸಲು ಉಸ್ತುವಾರಿ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದರು.

ಸಭೆಯಲ್ಲಿ ಶಾಸಕರಾದ ಗಣಿಗ ರವಿಕುಮಾರ್, ಕದಲೂರು ಉದಯ್, ಡಿ.ಸಿ ಡಾ.ಕುಮಾರ, ಜಿಪಂ ಸಿಇಒ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಮುಖಂಡರಾದ ಸಿ. ಕುಮಾರಿ, ಭರತ್ ರಾಜ್, ಕೃಷ್ಣೇಗೌಡ, ನಾಗಣ್ಣಗೌಡ, ಹೆಚ್.ಡಿ.ಜಯರಂ ನರಸಿಂಹಮೂರ್ತಿ ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ