Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸಹಾಯಕ ನಿರ್ದೇಶಕಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ

ವ್ಯಕ್ತಿಯೊಬ್ಬರ ಯೋಜನೆ ಅನುಮೋದನೆಗಾಗಿ ಲಂಚ ಪಡೆಯುವಾಗ ಮಂಡ್ಯನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕಿ ಸೇರಿದಂತೆ ಮೂವರು ನೌಕರರು ಲೋಕಯುಕ್ತ ಬಲೆ ಬಿದ್ದಿದ್ದಾರೆ.

ಯೋಜನಾ ನಿರ್ದೇಶಕಿ ಅನನ್ಯ ಮನೋಹರ್, ಸೌಮ್ಯ ಹಾಗೂ ಗುತ್ತಿಗೆ ನೌಕರ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದವರು.

ಮದ್ದೂರು ತಾಲ್ಲೂಕಿನ ಚಂದೂಪುರ ಗ್ರಾಮದ ಪುನೀತ್ ಎಂಬುವವರ ಕೆಲಸವನ್ನು ಮಾಡಿಕೊಡುವುದಕ್ಕಾಗಿ ಈ ಅಧಿಕಾರಿಗಳು 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮುಂಗಡವಾಗಿ 15 ಸಾವಿರ ರೂ. ಗಳ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದರು.

ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಹಾಗೂ ಇನ್ಸ್ ಪೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ಮೂವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ