Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ನಾಳೆ ಪ್ರೊ.ಜಯಪ್ರಕಾಶ್ ಗೌಡಗೆ ಅಭಿನಂದನೆ

ಮಂಡ್ಯ ಜಿಲ್ಲೆಯ ಸಾಂಸ್ಕೃತಿಕ ಸಂಘಟಕ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ.ಜಯಪ್ರಕಾಶ ಗೌಡರಿಗೆ ಮಂಡ್ಯ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಅಭಿನಂದನಾ ಸಮಾರಂಭವನ್ನು ಕೆ.ಆರ್.ಪೇಟೆ ಪಟ್ಟಣದ ಗ್ರಾಮಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ಚಿಕ್ಕಣ್ಣಗೌಡ ಸಭಾಂಗಣದಲ್ಲಿ ಜು.26ರ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಾಜಿ ಅಧ್ಯಕ್ಷ ಕೆ.ಸೋಮಶೇಖರ್ ತಿಳಿಸಿದರು.

ಕೃಷ್ಣರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರೊ.ಬಿ. ಜಯಪ್ರಕಾಶ್ ಗೌಡ ಅವರ ಅಭಿನಂದನಾ ಸಮಾರಂಭವನ್ನು ಕುರಿತ ಮಾಹಿತಿಯನ್ನು ನೀಡಿದರು.

ಪ್ರೊ.ಜಯಪ್ರಕಾಶ್ ಗೌಡ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಬದ್ಧತೆಯಿಂದ ಕೆಲಸ ಮಾಡಿ ನೇಪಥ್ಯಕ್ಕೆ ಸರಿದಿದ್ದ ಮೂಡಲಪಾಯ ಯಕ್ಷಗಾನ ಕಲೆಯನ್ನು ಮತ್ತೆ ಸಮಾಜದಲ್ಲಿ ಮುನ್ನಡೆಗೆ ತರುವಲ್ಲಿ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಅವರ ಸಾಹಿತ್ಯ, ಜಾನಪದ ಹಾಗೂ ಸಂಘಟನೆಯ ವಿವಿಧ ಕಾರ್ಯಕ್ಷೇತ್ರದ ಮಜಲುಗಳನ್ನು ಅವಲೋಕನ ಮಾಡಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿರುವ ಹೆಮ್ಮೆಯ ವಿಚಾರ ಎಂದರು.

ಗೋಷ್ಠಿಯಲ್ಲಿ ತಾಲೂಕು ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಕತ್ತರಘಟ್ಟ ವಾಸು, ಹಿರಿಯ ಪತ್ರಕರ್ತರಾದ ಬಳ್ಳೇಕೆರೆ ಮಂಜುನಾಥ್, ಕೆ.ಆರ್. ನೀಲಕಂಠ, ಯುವ ಮುಖಂಡ ಬಿಗ್ ಬಾಸ್ ಮೋಹನ್, ತಾಲೂಕು ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಮಾರೇನಹಳ್ಳಿ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ