Sunday, November 22, 2026

ಪ್ರಾಯೋಗಿಕ ಆವೃತ್ತಿ

ಮುಖ್ಯಮಂತ್ರಿಗಳಿಗೆ ಕಪ್ಪುಬಾವುಟ ಪ್ರದರ್ಶನ : ಅಂದಾನಿ ಸೋಮನಹಳ್ಳಿ

ನುಡಿದಂತೆ ನಡೆದಿದ್ದೇವೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಮತಪಡೆದು ಎಸ್‌ಸಿಎಸ್‌ಪಿ ಟಿಎಸ್‌ಪಿಯ 25 ಸಾವಿರ ಕೋಟಿ ರೂ.ಗಳನ್ನು ಗ್ಯಾರೆಂಟಿ ಯೋಜನೆಗೆ ಬಳಸಿದ್ದು, ಮದ್ದೂರಲ್ಲಿ ಬೃಹತ್ ಕಾರ್ಯಕ್ರಮದ ವೇಳೆ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಅಂದಾನಿ ಸೋಮನಹಳ್ಳಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಲಾಗುವುದು ಎಂದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಉಪ ಕಾಯ್ದೆ 7ಡಿ ರದ್ದುಗೊಳಿಸಿ 7 ಸಿ ಮೂಲಕ ಎಸ್‌ಸಿಎಸ್‌ಪಿ/ಟಿಎಸ್‌ಪಿಯ 25 ಸಾವಿರ ಕೋಟಿ ಹಣವನ್ನು ಹಿಂಪಡೆದು ಗ್ಯಾರಂಟಿ ಯೋಜನೆಗೆ ಬಳಸಿದ್ದು, ಮತ್ತು ಪರಿಶಿಷ್ಠ ಕಲ್ಯಾಣ ನಿಧಿಗೆ ವಾಪಸ್ ನೀಡಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಿ, ದಲಿತರ ಭೂಮಿ ರಕ್ಷಣೆಗೆ ಕ್ರಮ ವಹಿಸಬೇಕು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು, ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಹುದ್ದೆ ಪಡೆದವರನ್ನು ವಜಾ ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು, ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟಿ.ಡಿ.ಬಸವರಾಜು, ಡಿ.ಕೆ.ಅಂಕಯ್ಯ, ಮೂರ್ತಿ, ಎಂ.ಶಿವು, ವೆಂಕಟಗಿರಿ, ಕೆಂಪಣ್ಣ, ಮುರುಗನ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ