Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪರ್ತಕರ್ತರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ : ವಿಜಯ್ ಆನಂದ್

ಮಾಧ್ಯಮಗಳು ತ್ವರಿತವಾಗಿ ಸುದ್ದಿ ಬಿತ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸುದ್ದಿ ಪ್ರಚಾರದ ನಡುವೆಯೂ ಪತ್ರಕರ್ತರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ತಿಳಿಸಿದರು.

ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಪತ್ರಕರ್ತ ಸದಸ್ಯರು ಮತ್ತು ಕುಟುಂಬ ಸದಸ್ಯರಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಗುಂಡು ಹಾಗೂ ಭರ್ಜಿ ಎಸೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ಒತ್ತಡದಲ್ಲಿ ಕಾರ್ಯ ಮಾಡುವವರು. ಅವರ ಒತ್ತಡ ಕಡಿಮೆ ಮಾಡಲು ಕ್ರೀಡಾಕೂಟಗಳು ನಡೆಯಬೇಕು. ಪತ್ರಕರ್ತರು ಮತ್ತು ಕುಟುಂಬಸ್ಥರು ಇಷ್ಟು ಆಸಕ್ತಿಯಿಂದ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದು ಸಂತಸದ ವಿಚಾರ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತೀಕೆರೆ ಜಯರಾಂ ಮಾತನಾಡಿ, ಪ್ರತಿ ವರ್ಷವೂ ಮಂಡ್ಯ ಪತ್ರಕರ್ತರ‌ ಸಂಘದಿಂದ ಕ್ರೀಡಾಕೂಟ ನಡೆಸುತ್ತಿದ್ದು, ಈ ಪದ್ದತಿ ಮುಂದುವರೆದುಕೊಂಡು ಬಂದಿದೆ. ಪತ್ರಕರ್ತರು ಹಾಗೂ ಅವರ ಕುಟುಂಬವು ಒಂದೇ ಕಡೆ ಸೇರಿ ಈ ರೀತಿಯ ಕ್ರೀಡಾಕೂಟ ದಲ್ಲಿ ಭಾಗಿಯಾಗುವುದು ಒಳ್ಳೆಯ ವಿಚಾರ ಎಂದು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್.ನವೀನ್ ಕುಮಾರ್ ಮಾತನಾಡಿ, ಒತ್ತಡದಿಂದ ಕಾರ್ಯನಿರ್ವಹಿಸುವ ಪತ್ರಕರ್ತರು ಇಷ್ಟು ಉತ್ಸಾಹದಿಂದ ಕ್ರೀಡಾಕೂಟ ದಲ್ಲಿ ಭಾಗವಹಿಸಿದ್ದಲ್ಲದೇ ಅವರ ಕುಟುಂಬಸ್ಥರನ್ನು ಕರೆ ತಂದಿದ್ದಾರೆ. ಜಿಲ್ಲೆಯ ಎಲ್ಲಾ ಭಾಗದಿಂದ 200ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯ ವಿವಿಧೆಡೆಗಳಿಂದ 200 ಹೆಚ್ಚು ಪತ್ರಕರ್ತರು ಹಾಗೂ ಕುಟುಂಬ ಸದಸ್ಯರು ಆಗಮಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು. ಕ್ರೀಡಾಕೂಟದಲ್ಲಿ ಓಟ, ಗುಂಡು ಎಸೆತ, ಭರ್ಜಿ ಎಸೆತ, ಲೆಮೆನ್ ಅಂಡ್ ಸ್ಪೂನ್, ಮೂಸಿಕಲ್ ಛೇರ್ ಸೇರಿದಂತೆ ಇನ್ನಿತರೆ ಕ್ರೀಡೆಗಳು ಜರುಗಿದವು.

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ರಂಗಗೀತೆ, ಭಾವಗೀತೆ ಸ್ಪರ್ಧೆಯಲ್ಲಿ ಹಲವು ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಆಸಕ್ತಿಯಿಂದ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಜಿಲ್ಲಾ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಕೃಷ್ಣ ಸ್ವರ್ಣಸಂದ್ರ, ಬಿ.ಪ್ರಕಾಶ್, ನವೀನ್, ಪ್ರಧಾನ ಕಾರ್ಯದರ್ಶಿ ಆನಂದ, ಖಜಾಂಚಿ ನಂಜುಂಡಸ್ವಾಮಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ