Tuesday, November 24, 2026

ಪ್ರಾಯೋಗಿಕ ಆವೃತ್ತಿ

ರಮ್ಯಾ ಕುರಿತು ಅವಹೇಳನ | ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ ಹಾಗೂ ಚಿತ್ರ ನಟಿ ರಮ್ಯಾ ಅವರ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸೂಚನೆ ನೀಡಿದ್ದಾರೆ.

ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ನೀಡಿರುವ ಬಗ್ಗೆ ವರದಿಯಾಗಿದೆ. ಇದರಿಂದ ಮಹಿಳೆಯ ಸ್ಥಾನಮಾನಕ್ಕೆ ತೊಂದರೆಯಾಗುತ್ತಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದ ರಮ್ಯಾ ಅವರ ಕುರಿತು ನಟ ದರ್ಶನ್ ಅಭಿಮಾನಿಗಳು ಅವಹೇಳನಕಾರಿಯಾಗಿ ಟೀಕೆ ಮಾಡಿದ್ದಾರೆಂಬುದು ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ