Saturday, November 21, 2026

ಪ್ರಾಯೋಗಿಕ ಆವೃತ್ತಿ

ನಟಿ ರಮ್ಯಾ ಕುರಿತು ಅವಹೇಳನ | 43 ಜನ ನಟ ದರ್ಶನ್ ಅಭಿಮಾನಿಗಳ ವಿರುದ್ದ ಎಫ್ಐಆರ್

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ, ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ನಟ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ ಎಫ್‌ಐಆ‌ರ್ ದಾಖಲಿಸಿದ್ದಾರೆ.

ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ರಮ್ಯಾ ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್ ಬಳಿಕ ನಟಿ ವಿರುದ್ಧ ಡಿಬಾಸ್‌ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದರು. ಈ ಕಾಮೆಂಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತ್ತು

ಹಾಗೆಯೇ ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ ಅವರು, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ರಮ್ಯಾ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇನ್ನು ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ