ಬೀಡಿ, ಸಿಗರೇಟು, ಮದ್ಯಪಾನ ಸೇರಿದಂತೆ ತಂಬಾಕು ಉತ್ಪನ್ನಗಳಿಂದ ತಯಾರಿಸಿದ ವಸ್ತುಗಳಿಂದ ಮುಕ್ತವಾದ ಆರೋಗ್ಯವಂತ ವ್ಯಸನಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ನಾಗರೀಕ ಸಮಾಜದಲ್ಲಿ ವಾಸ ಮಾಡುವ ಪ್ರತಿಯೊಬ್ಬರು ಕೈಜೋಡಿಸಿ ಕೆಲಸ ಮಾಡಬೇಕು ಎಂದು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಮಾರಾಣಿ ಸಲಹೆ ನೀಡಿದರು.
ಕೃಷ್ಣರಾಜಪೇಟೆ ಪಟ್ಟಣದಲ್ಲಿ ತಾಲೂಕು ಆಡಳಿತವು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥವನ್ನು ಉದ್ಘಾಟಿಸಿ ಮಾತನಾಡಿದರು.
ಬೀಡಿ, ಸಿಗರೇಟು, ಮಧ್ಯಪಾನ ಸೇರಿದಂತೆ ತಂಬಾಕು ವಸ್ತುಗಳಿಂದ ತಯಾರಾಗುವ ಉತ್ಪನ್ನಗಳನ್ನು ಬಳಸಿ ಯುವಜನರು ಹಾಗೂ ವಿದ್ಯಾರ್ಥಿಗಳು ಕೃಷಿ ಕೂಲಿ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗಿ ಅಕಾಲಿಕವಾಗಿ ಸಾವಿಗೆ ಶರಣಾಗುತ್ತಿದ್ದಾರೆ. ಆರೋಗ್ಯವಂತ ನಾಗರಿಕ ಸಮಾಜಕ್ಕೆ ಮುಳ್ಳಾಗಿರುವ ತಂಬಾಕು ಉತ್ಪನ್ನಗಳು ಹಾಗೂ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಿಲ್ಲಿಸುವವರೆಗೂ ನಾಗರಿಕ ಸಮಾಜದಲ್ಲಿ ವಾಸ ಮಾಡುವ ನಾವೆಲ್ಲರೂ ಕೂಡಾ ಜಾಗೃತರಾಗಿ ಕೆಲಸ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ ಎಂದರು.
ತಾಲೂಕು ನಯನಜ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಾ.ಕೆ.ಎಂ. ಶಿವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವಿದ್ಯಾವತಿ, ಗ್ರೇಡ್-2 ತಹಸೀಲ್ದಾರ್ ಲೋಕೇಶ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಕುಮಾರ್, ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಿ.ಟಿ. ಪುಲಿಗೆರೆಯ್ಯ ಸೇರಿದಂತೆ ಶಾಲಾ-ಕಾಲೇಜುಗಳ ಶಿಕ್ಷಕರು ಉಪನ್ಯಾಸಕರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನ ಮುಕ್ತ ದಿನಾಚರಣೆಯ ಜಾಗೃತಿ ಜಾತಕದಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿ ಶ್ರೀಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದರು.




