Monday, November 23, 2026

ಪ್ರಾಯೋಗಿಕ ಆವೃತ್ತಿ

‘ಮತ ಕಳ್ಳತನ’ದ ವಿರುದ್ದ ರಾಹುಲ್ ಗಾಂಧಿ ಹೋರಾಟಕ್ಕೆ ಮಂಡ್ಯದಿಂದ 5 ಸಾವಿರ ಜನ ; ಚಲುವರಾಯಸ್ವಾಮಿ

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಆಯೋಗ ಮತ ಕಳ್ಳತನ ನಡೆಸಿರುವುದರ ವಿರುದ್ದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಆ.5ರಂದು ರಾಹುಲ್ ಗಾಂಧಿ ಪ್ರತಿಭಟನೆ ನಡೆಸಲಿದ್ದು, ಈ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯಿಂದ 5 ಸಾವಿರ ಜನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಕೃಷಿ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ನಾಯಕರಾದ ರಾಹುಲ್ ಗಾಂಧಿ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಯೇ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಹೇಗೆ ‘ಮತಕಳ್ಳತನ’ ನಡೆದಿದೆ ಎಂಬ ಮಾಹಿತಿಯಲ್ಲಿ ರಾಹುಲ್ ಗಾಂಧಿಯವರು ಬಹಿರಂಗ ಪಡಿಸಲಿದ್ದಾರೆಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಆಗಿರುವ ಲೋಪವನ್ನು ತನಿಖೆ ಮಾಡಿ‌ ದೂರು ಕೊಟ್ಟರು ತೆಗೆದುಕೊಳ್ಳದ ಕಾರಣ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ, ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಇದೆ ವಿಚಾರವಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡೋದಾಗಿ ತೀರ್ಮಾನ ಮಾಡಲಾಗಿದೆ. ಆರ್ ಸಿ ಬಿ ರ್‍ಯಾಲಿಯಲ್ಲಿ ಆದ ಅನಾಹುತದ ಹಿನ್ನೆಲೆಯಲ್ಲಿ ನ್ಯಾಯಾಲಯವು ಪಾದಯಾತ್ರೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಕ್ಯಾಬಿನೆಟ್ ಮಂತ್ರಿಗಳು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರತಿನಿಧಿಗಳು, ಮಹಿಳಾ ಘಟಕದ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಪ್ರತಿ ಜಿಲ್ಲೆಯಿಂದ ಐದು ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಮಂಡ್ಯ ಜಿಲ್ಲೆಯಿಂದ ಜವಾಬ್ದಾರಿಯನ್ನು ಜಿಲ್ಲಾಧ್ಯಕ್ಷರಾದ ಸಿಡಿ ಗಂಗಾಧರ್ ವಹಿಸಿಕೊಂಡಿದ್ದಾರೆ ಎಂದರು.

ಅಂದು ಬೆಳಿಗ್ಗೆ 10 ಗಂಟೆ ಒಳಗೆ ಫ್ರೀಡಂ ಪಾರ್ಕ್ ನಲ್ಲಿ ಇರಲು ಮನವಿ ಮಾಡ್ತೀವಿ. ಇದರಲ್ಲಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು, ಬಿಜೆಪಿ ಲೋಪಗಳ ಬಗ್ಗೆ ಯುವಕರಿಗೆ ರಾಹುಲ್ ಗಾಂಧಿ ತಿಳಿಸಲಿದ್ಧಾರೆ. ಪ್ರತಿಭಟನೆ ಮುಗಿಸಿ ಚುನಾವಣಾ ಕಮಿಷನ್ ಗೆ ಮನವಿ ಕೊಡಲಾಗುವುದು. ಪ್ರತಿಭಟನೆಯಲ್ಲಿ 60 ರಿಂದ 70 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದರು.

ಬಿಜೆಪಿಯಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ

ಕೇಂದ್ರ ಸರ್ಕಾರ ಇಡಿ ಹಾಗೂ ಐಟಿ ಯನ್ನ ದುರುಪಯೋಗ ಮಾಡಿಕೊಂಡು ರಾಜಕಾರಣ ಮಾಡ್ತಿದ್ದಾರೆ, ಹಾಗೆ ಚುನಾವಣಾ ಆಯೋಗವನ್ನು ದುರುಪಯೋಗ ಮಾಡ್ಕೊಳ್ತಿದ್ದಾರೆ. ನಮ್ಮ ದೇಶ ಪ್ರಜಾಪ್ರಭುತ್ವ ರಾಷ್ಟ ಇದು ಉಳಿಯಬೇಕು. ಬಿಜೆಪಿಗರು ಪ್ರಜಾಪ್ರಭುತ್ವ ಸಂವಿಧಾನ ಹಾಗೂ ರೈತರ ಪರವಾಗಿ ಇಲ್ಲ. ರಾಷ್ಟ್ರದ ಚುನಾವಣಾ ಸಂವಿಧಾನದ ಅಡಿಯಲ್ಲಿ ಚುನಾವಣಾ ಮಾಡ್ಬೇಕು ಅನ್ನೋದು ಇದೆ, ಆದ್ರೆ ಬಿಜೆಪಿಯವರು ತಮ್ಮ ಆಡಳಿತಕ್ಕೆ ಚುನಾವಣಾ ಆಯೋಗ ಇದೆ ಅಂತ ತಿಳಿದುಕೊಂಡಿದ್ದಾರೆ ಎಂದು ದೂರಿದರು.

ಡಿಕೆ ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಮತಗಳತನ ಆಗಿದೆ ಎಂದು ಹೇಳಿದ್ದಾರೆ. ಅಲ್ಲೂ ಸಹ ತನಿಖೆಯನ್ನು ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲಾ 28 ಕ್ಷೇತ್ರದಲ್ಲಿ ತನಿಖೆ ಮಾಡ್ಬೇಕ ಎನ್ನುವುದನ್ನ ರಾಹುಲ್ ಗಾಂದಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ತೀರ್ಮಾನ ಮಾಡ್ತಾರೆ ಎಂದರು.

ಗೋಷ್ಠಿಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಕಾಂಗ್ರೆಸ್ ಉಸ್ತುವಾರಿ ರಾಮ್ ಪ್ರಸಾದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಶುಭದಾಯಿನಿ, ಮುಖಂಡರಾದ ಅಪ್ಪಾಜಿಗೌಡ ಹಾಗೂ ಚಿದಂಬರ್ ಸೇರಿದಂತೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ