Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ರಾಗಿ ಬೊಮ್ಮನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಮಹದೇವಸ್ವಾಮಿ ಆಯ್ಕೆ

ಮಳವಳ್ಳಿ ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಹದೇವಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ಪ್ರಭುಸ್ವಾಮಿಯವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಮಹದೇವಸ್ವಾಮಿ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೇಲೆಯಲ್ಲಿ ಅವಿರೋಧ ಆಯ್ಕೆಯಾಗಿರುವ ಬಗ್ಗೆ ಚುನಾವಣಾಧಿಕಾರಿ ಸೋಮಶೇಖರ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಮಹಾದೇವಸ್ವಾಮಿ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ, ಮನ್ಮುಲ್ ನಿರ್ದೇಶಕ ಆರ್. ಎನ್ ವಿಶ್ವಾಸ್ ಹಾಗೂ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಉಪಾಧ್ಯಕ್ಷೆ ನಾಗಮ್ಮ, ಮಾಜಿ ಅಧ್ಯಕ್ಷರಾದ ಪ್ರಭು, ರವಿ, ಶೀಲಾ ರೂಪಾರಾಣಿ, ಮಂಜುಳಾ, ಸದಸ್ಯರಾದ ಗುಂಡ ಶೆಟ್ಟಿ, ಶಾರದಮ್ಮ ಚಿನ್ನಮ್ಮ, ಮಂಗಳಮ್ಮ, ಮಹದೇವಮ್ಮ, ಮಹಾದೇವ, ಪ್ರಕಾಶ್, ಶಾಂತಕುಮಾರ್ ಸೇರಿದಂತೆ ಮುಖಂಡರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ