ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನತೆಯ ಸೇವೆ ಮಾಡುವ ಅವಕಾಶ ನೀಡುತ್ತಿರಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ತಿಳಿಸಿದರು.
ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ (ಮಿಮ್ಸ್ ) ಆವರಣದಲ್ಲಿರುವ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಬೆಳಗಿನ ಉಪಹಾರ, ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಅವರು ಮಾತನಾಡಿದರು.
ಬಡವರ ಭಾಗ್ಯವಿಧಾತ ಸಿದ್ದರಾಮಯ್ಯ ಅವರು ಇನ್ನು ಹೆಚ್ಚಿನದಾಗಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿ ಎಂದು ಅವರ ಹುಟ್ಟು ಹಬ್ಬದ ಅಂಗವಾಗಿ ಶುಭ ಕೋರಿದರು.
ಜಿಲ್ಲಾ ಕಾಂಗ್ರೆಸ್ ಮುಖಂಡ ಶಿವನಂಜು ಮಾತನಾಡಿ ಅಪರೂಪದ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಸುವರ್ಣ ಯುಗವಾಗಿದೆ ಎಂದರು.
ಹಲವು ಪ್ರಥಮಗಳಿಗೆ ಕರ್ನಾಟಕ ರಾಜ್ಯ ಸಾಕ್ಷಿಯಾಗಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ತಲಾ ಆಧಾಯ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಜಿಎಸ್‌ಟಿಯಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. ಅಕ್ಕಿ ಹಾಗೂ ಸಕ್ಕರೆ ಉತ್ಪಾದನೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದ್ದು ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಇನ್ನಷ್ಟು ಕೊಂಡೊಯ್ಯಲಿ ಎಂದು ಹೇಳಿದರು.
ಗ್ಯಾರೆಂಟಿಗಳಿಂದ ತಲಾದಾಯವನ್ನು ಹೆಚ್ಚು ಮಾಡಬಹುದು ಎಂದು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಶ್ರೀಧರ್, ಕಾಂಗ್ರೆಸ್ ಮುಖಂಡರಾದ ವಿಜಯಲಕ್ಷ್ಮಿ ರಘುನಂದನ್, ಅಂಜನಾ ಶ್ರೀಕಾಂತ್, ಸಾತನೂರು ಕೃಷ್ಣ, ಚಂದಗಾಲು ವಿಜಯಕುಮಾರ್, ಹಲ್ಲೇಗೆರೆ ಶಿವರಾಮ್, ಹಳುವಾಡಿ ವೆಂಕಟೇಶ್, ಹರೀಶ್, ವೀಣಾ,ಎನ್.ದೊಡ್ಡಯ್ಯ ಸೇರಿದಂತೆ ಇತರರು ಹಾಜರಿದ್ದರು.




