Friday, November 20, 2026

ಪ್ರಾಯೋಗಿಕ ಆವೃತ್ತಿ

ಸ್ವಂತ ಕಚೇರಿ ಹೊಂದಿರದ ಗ್ರಾಮಾಡಳಿತ ಅಧಿಕಾರಿಗಳಿಗೆ ಸರ್ಕಾರಿ ಕಚೇರಿಯಲ್ಲಿ ವ್ಯವಸ್ಥೆ : ಕೃಷ್ಣ ಬೈರೇಗೌಡ

ಸ್ವಂತ ಕಚೇರಿ ಹೊಂದಿರದ ಗ್ರಾಮ ಆಡಳಿತ ಅಧಿಕಾರಿಗಳಿಗೆ (ವಿಎಓ) ಗ್ರಾಮ ಪಂಚಾಯಿತಿ ಕಟ್ಟಡ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ ಕಚೇರಿ ವ್ಯವಸ್ಥೆ ಮಾಡಿ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶಾಸಕ ಮಧು ಜಿ.ಮಾದೇಗೌಡ ಅವರು ವಿ.ಎ.ಓ. ಗಳಿಗೆ ಕರ್ತವ್ಯ ನಿರ್ವಹಿಸಲು ನಿರ್ದಿಷ್ಟ ಸ್ಥಳದಲ್ಲಿ ಕಚೇರಿ ಇಲ್ಲದಿರುವುದರಿಂದ ಜನರಿಗೆ ತೊಂದರೆ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್ತಿನ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ2(5)ರಲ್ಲಿ ಅಗತ್ಯಪಡಿಸಲಾದಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ ಸ್ಥಳವನ್ನು ನಿಗದಿಪಡಿಸಿ ತಾಲ್ಲೂಕುವಾರು ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 416 ವಿ.ಎ.ಎ.ಗಳಿಗೆ ಕಚೇರಿ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಗರಸಭೆಗೆ ಸೇರಿದ 47 ನಿವೇಶನಗಳಿಗೆ ಫೆನ್ಸಿಂಗ್

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆಗೆ ಸೇರಿದ ಒಟ್ಟು 47 ನಿವೇಶನಗಳಿದ್ದು, ಅತಿಕ್ರಮ ತಪ್ಪಿಸಲು ಸರ್ವೆ ಕೈಗೊಂಡು ಫೆನ್ಸಿಂಗ್ ಹಾಕಿ ನಾಮಫಲಕ ಅಳವಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಪೌರಾಡಳಿ ಮತ್ತು ಹಜ್ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡರ ಪ್ರಶ್ನೆಗೆ ವಿಧಾನ ಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿರುವ ಸಚಿವರು, ನಗರಸಭೆಗೆ ಸೇರಿದ ಆಸ್ತಿಗಳ ರಕ್ಷಣೆ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ವಾರ್ಡ್ 12ರಲ್ಲಿ 5 ನಿವೇಶನಗಳು, ವಾರ್ಡ್ 15ರಲ್ಲಿ 7, ವಾರ್ಡ್ 22ರಲ್ಲಿ 6, ವಾರ್ಡ್ 23ರಲ್ಲಿ 22 ಹಾಗೂ ವಾರ್ಡ್ 27ರಲ್ಲಿ 7 ನಿವೇಶನಗಳು ಸೇರಿದಂತೆ ಒಟ್ಟು 47 ನಿವೇಶನಗಳಿವೆ. ಈ ಎಲ್ಲಾ ನಿವೇಶನಗಳ ಸರ್ವೆ ಕೈಗೊಂಡು ನಗರಸಭೆ ನಿಧಿಯಿಂದ ಫೆನ್ಸಿಂಗ್ ಹಾಕಿ ನಾಮಫಲಕ ಅಳವಡಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ನಗರಸಭೆ ವ್ಯಾಪ್ತಿಯಲ್ಲಿ 19 ಸ್ಮಶಾನಗಳಿದ್ದು, ರಾಜ್ಯ ಹಣಕಾಸು ಅನುದಾನ, ಕೇಂದ್ರ ಹಣಕಾಸು ಅನುದಾನ, ಎಸ್.ಎಫ್.ಸಿ. ವಿಶೇಷ ಅನುದಾನ, ನಗರಸಭಾ ನಿಧಿ ಸೇರಿದಂತೆ ಇನ್ನಿತರೆ ಅನುದಾನದಲ್ಲಿ ಸ್ಮಶಾನಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಅಭಿವೃದ್ಧಿ ಕಾರ್ಯಗಳು ಚಾಲ್ತಿಯಲ್ಲಿರುತ್ತವೆ ಎಂದೂ ವಿವರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ