Sunday, November 22, 2026

ಪ್ರಾಯೋಗಿಕ ಆವೃತ್ತಿ

ಬೆಂಗಳೂರಿನತ್ತ ದೌಡಾಯಿಸಿದ ದರ್ಶನ್ : ಪವಿತ್ರಗೌಡ ಆರೆಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ 7 ಜನರ ಜಾಮೀನು ರದ್ದುಪಡಿಸಿದ ಹಿನ್ನಲೆಯಲ್ಲಿ ಕೊಡಗಿನಲ್ಲಿದ್ದ ದರ್ಶನ್ ಬೆಂಗಳೂರಿನತ್ತ ದೌಡಾಯಿಸಿದ್ದಾರೆಂದು ತಿಳಿದು ಬಂದಿದೆ.

ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ರಾಜರಾಜೇಶ್ವರಿನಗರದ ಮನೆಯಲ್ಲಿದ್ದ ಇದ್ದ ಪವಿತ್ರಗೌಡ ಅವರನ್ನು ಬಂಧಿಸಿದ್ದಾರೆ.

ಬಲ್ಲ ಮೂಲಗಳ ಪ್ರಕಾರ ಮೈಸೂರಿನಿಂದ ತಮಿಳುನಾಡಿನಲ್ಲಿರುವ ದರ್ಶನ್‌ ಸಂಜೆಯ ಹೊತ್ತಿಗೆ ಬೆಂಗಳೂರಿಗೆ ಬರಲಿದ್ದಾರೆ.  ನ್ಯಾಯಾಲಯಕ್ಕೆ ಅವರಾಗಿಯೇ ಶರಣಾದರೆ ಅಲ್ಲಿಯೇ ವಶಕ್ಕೆ ಪಡೆದುಕೊಳ್ಳಲಾಗುವುದು ಇಲ್ಲವೇ ಪೊಲೀಸರೇ ಎಲ್ಲ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಬಂಧನ ನಂತರ ದರ್ಶನ್‌ ಅವರನ್ನು ಮತ್ತೆ ಬಳ್ಳಾರಿ ಜೈಲಿಗೆ ಕಳುಹಿಸಲಾಗುತ್ತದೆ ಎನ್ನಲಾಗಿದೆ.

ಆರಂಭದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗ ಅವರಿಗೆ ವಿಶೇಷ ಆತಿಥ್ಯ ನೀಡಿದ ಆರೋಪ ಎದುರಾಗಿತ್ತು. ಹೀಗಾಗಿ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು.

ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ತನ್ನ ವಕೀಲರನ್ನು ಸಂಪರ್ಕಿಸಿರುವ ದರ್ಶನ್ ಈಗ ಬೆಂಗಳೂರಿಗೆ ತೆರಳಲಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ