Friday, November 20, 2026

ಪ್ರಾಯೋಗಿಕ ಆವೃತ್ತಿ

ಇಂದಿರಾ ಕ್ಯಾಂಟೀನ್ ನಲ್ಲಿ ಶುಚಿ – ರುಚಿಯಾದ ಆಹಾರ ಒದಗಿಸಿ: ಡಾ.ಕುಮಾರ

ಇಂದಿರಾ ಕ್ಯಾಂಟೀನ್ ಗೆ ಆಹಾರ ಸೇವಿಸಲು ಬರುವ ಬಹಳಷ್ಟು ಜನರು ಬಡ ವರ್ಗದವರಾಗಿದ್ದು, ಅವರಿಗೆ ಶುಚಿ ಹಾಗೂ ರುಚಿಯಾದ ಆಹಾರ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿರಾ ಕ್ಯಾಂಟೀನ್ ನಲ್ಲಿ ನೀಡುವ ಆಹಾರದ ಗುಣಮಟ್ಟ ಹಾಗೂ ಶುದ್ಧ ಕುಡಿಯುವ ನೀರನ್ನು ಅಧಿಕಾರಿಗಳು ನಿಗದಿತವಾಗಿ ಪರಿಶೀಲಿಸಬೇಕು ಎಂದರು.

ಮಂಡ್ಯ ಜಿಲ್ಲೆಯ ಇಂದಿರಾ ಕ್ಯಾಂಟಿನ್ ಗಳಲ್ಲಿ ನೀಡಲಾಗುವ ಆಹಾರ ಗುಣಮಟ್ಟದ ಕಮ್ಮಿ ಹಾಗೂ ಪ್ರಮಾಣವು ಕಡಿಮೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ, ಅಧಿಕಾರಿಗಳು ಆಗಾಗ ಇಂದಿರಾ ಕ್ಯಾಂಟಿನ್ ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಹಾಗೂ ಪ್ರಮಾಣವನ್ನು ಪರಿಶೀಲನೆ ನಡೆಸಿ ಎಂದು ತಿಳಿಸಿದರು.

ಅಮೃತ 2.0 ಯೋಜನೆಯಡಿ 23.22 ಕೋಟಿ ರೂ ಅನುದಾನದಲ್ಲಿ ಪಾಂಡವಪುರ ಪಟ್ಟಣದಲ್ಲಿ , 36.61 ಕೋಟಿ ರೂ ಅನುದಾನದಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ , 36.07 ಕೋಟಿ ರೂ ವೆಚ್ಚದಲ್ಲಿ ನಾಗಮಂಗಲ ಪಟ್ಟಣದಲ್ಲಿ , 31.06 ಕೋಟಿ ರೂ ವೆಚ್ಚದಲ್ಲಿ ಬೆಳ್ಳೂರು ಪಟ್ಟಣದಲ್ಲಿ, 23.44 ಕೋಟಿ ರೂ ವೆಚ್ಚದಲ್ಲಿ ಶ್ರೀರಂಗಪಟ್ಟಣ ಪಟ್ಟಣದಲ್ಲಿ ಕುಡಿಯುವ ನೀರು ಒದಗಿಸಲು ಕಾಮಗಾರಿ‌ ಕೈಗೊಳ್ಳಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಿ ಎಂದರು.

ಬೀದಿ ಬದಿಯ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಗುರುತಿಸಿ

ಮಂಡ್ಯ ನಗರದಲ್ಲಿ ಬೀದಿ ಬದಿಯ ವ್ಯಾಪಾರಿಗಳು ಎಲ್ಲೆಂದರಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ, ಬೀದಿ ಬದಿಯ ವ್ಯಾಪಾರಿಗಳು ವ್ಯಾಪಾರ ಮಾಡಲು ಪರ್ಯಾಯ ಸ್ಥಳ ಗುರುತಿಸಿ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ಸರ್ಕಾರ ರೂಪಿಸಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಗರ ಸ್ಥಳೀಯ ಸಂಸ್ಥೆಗಳು ವ್ಯಾಪರಸ್ಥರಿಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣ ಗಳಿಸಿ ಹಾಗೂ ಬಾಕಿ ಇರುವ ನೀರಿನ ತೆರಿಗೆ ಶುಲ್ಕವನ್ನು ವಸೂಲಾತಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಗುಣಮಟ್ಟವನ್ನು ನಿಗಧಿತ ಅವಧಿಯೊಳಗೆ ಪರಿಶೀಲನೆ ನಡೆಸಿ ಜೊತೆ ಕಳೆದ ನಾಲ್ಕು ತಿಂಗಳು ನೀರಿನ ಗುಣಮಟ್ಟವನ್ನು ತಾಳೆ ಮಾಡಿ ನೋಡಿ ಕುಡಿಯುವ ನೀರಿನ ಗುಣಮಟ್ಟವನ್ನು ಹೆಚ್ಚಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಟಿ.ಎನ್ ನರಸಿಂಹಮೂರ್ತಿ, ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ