Thursday, November 19, 2026

ಪ್ರಾಯೋಗಿಕ ಆವೃತ್ತಿ

ಬೆಂಗಳೂರಿನಲ್ಲಿ ಸ್ಪೋಟ | ಓರ್ವ ಬಾಲಕ ಸಾವು, 12 ಜನ ಗಂಭೀರ ಗಾಯ

ಬೆಂಗಳೂರುನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾನಾಸ್ಪದವಾಗಿ ಶುಕ್ರವಾರ(ಆ.15) ಸ್ಫೋಟ ಸಂಭಿಸಿದ್ದು, ಹತ್ತಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದೆ. ಘಟನೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಟು ವರ್ಷದ ಬಾಲಕ ಮೃತಪಟ್ಟಿದ್ದು, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಂಟಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಮನೆಯ ಗೋಡೆ ಮತ್ತು ಛಾವಣಿ ಕುಸಿದು ಬಿದ್ದಿದೆ. ಮೊದಲ ಮಹಡಿಯ ಮನೆಯು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಎಂಟಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. . ಕಸ್ತೂರಿ(28), ಸರಸಮ್ಮ(50), ಸಬ್ರಿನ್ ಬಾನು(35), ಫಾತಿಮಾ(8) ಸೇರಿ 7 ಜನರಿಗೆ ಗಾಯವಾಗಿದೆ. ಲ್ಲಿಯವರೆಗೂ 12 ಜನರಿಗೆ ಸಂಜಯ್‌ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕ ಮುಬಾರಕ್(10) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು ಕಂಡುಬಂದಿದೆ. ಅನುಮಾನಾಸ್ಪದ ವಸ್ತು ಸ್ಫೋಟದಿಂದಾಗಿ ವಿಲ್ಸನ್‌ ಗಾರ್ಡನ್‌ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಭಾರಿ ಆತಂಕ ಸೃಷ್ಟಿಸಿದೆ.

ಏಳು-ಎಂಟು ಗಂಟೆಗೆ ಸ್ಫೋಟ ಸಂಭವಿಸಿತು. ಏನಾಗಿದೆ ಅಂತಾನೆ ಗೊತ್ತಿಲ್ಲ. ದೊಡ್ಡ ಶಬ್ಧ ಬಂದಿತು. ಸಿಲಿಂಡರ್‌ ಸ್ಫೋಟ ಆಗಿದ್ದರೆ ಬೆಂಕಿ ಬರಬೇಕಿತ್ತು. ಬೆಂಕಿ ಬಂದಿಲ್ಲ ಏಕಾಏಕಿ ಅವಘಡ ಸಂಭವಿಸಿದೆ. ಕರೆಂಟ್‌ ಶಾಕ್‌ನಿಂದ ಹೀಗೆ ಆಗಿದ್ಯಾ ಅಥವಾ ಮೆಟ್ರೋ ಕಾಮಗಾರಿ ಇಲ್ಲಿ ನಡೆಯುತ್ತಿದೆ ಅದರಿಂದ ತೊಂದರೆಯಾಗಿದ್ಯಾ ಗೊತ್ತಾಗ್ತಿಲ್ಲ ಎಂದು ಸ್ಥಳೀಯರು ಹೇಳಿದರು.

ಸ್ಫೋಟ ಸಂಭವಿಸಿದ ಸ್ಥಳಕ್ಕೆ ಶಾಸಕ ಉದಯ್‌ ಗರುಡಾಚಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ